ಇತ್ತೀಚಿನ ಸುದ್ದಿ
ಮೂಡಿಗೆರೆ: ವಿಜಯ ಸಂಕಲ್ಪ ಯಾತ್ರೆಗೆ ಮುನ್ನವೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ಕುಮಾರಸ್ವಾಮಿ ಕೈತಪ್ಪಲಿದೆಯೇ ಟಿಕೆಟ್ ?
16/03/2023, 14:57
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka.com
ಮೂಡಿಗೆರೆ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ
ವಿರುದ್ಧ ಬಿಜೆಪಿಯಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಿದ್ದಾರೆ. ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ.
ಹಾಲಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರ ವಿರುದ್ಧ ಬಹಿರಂಗ ಸಭೆ ನಡೆಸಿದ್ದಾರೆ. ಗುರುವಾರ ಸಂಜೆ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಸ್ಫೋಟಗೊಂಡ ಭಿನ್ನಮತ ಇದರೊಂದಿಗೆ ಮೂಡಿಗೆರೆ ಬಿಜೆಪಿಯಲ್ಲಿ ಬಣ ರಾಜಕೀಯ ಸಕ್ರೀಯಗೊಂಡಿದೆ. ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ವ್ಯಕ್ತಿ ಮುಖ್ಯ ಅಲ್ಲ, ನಮ್ಗೆ ಪಕ್ಷ ಮುಖ್ಯ ಎಂದ ಸಾವಿರಾರು ಕಾರ್ಯಕರ್ತರು ಹೇಳಿದ್ದಾರೆ.
ಒಂದು ಗುಂಪು ಕುಮಾರಸ್ವಾಮಿ ಪರ ಬ್ಯಾಟಿಂಗ್, ಮತ್ತೊಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸಿದೆ.
ವಿಜಯ ಸಂಕಲ್ಪಯಾತ್ರೆ ಅಂಗವಾಗಿ ಮಧ್ಯಾಹ್ನ ರೋಡ್ ಶೋ ಮುನ್ನ ಬಂಡಾಯ ಗುಂಪಿನಿಂದ ಪ್ರತ್ಯಕ ಸಭೆ ನಡೆದಿದೆ. ಮೂಡಿಗೆರೆ ಪಟ್ಟಣದ ಪ್ರೀತಮ್ ಸಮುದಾಯ ಭವನದಲ್ಲಿ ಕಾರ್ಯಕರ್ತರ
ಬಹಿರಂಗ ಸಭೆ ನಡೆದಿದೆ.ಯಡಿಯೂರಪ್ಪ ನೇತೃತ್ವದಲ್ಲಿ ವಿಜಯ ಸಂಕಲ್ಪಯಾತ್ರೆ ನಡೆಯಲಿದೆ.
ಯಾತ್ರೆಯಲ್ಲಿ ಬಿಜೆಪಿ ಪಕ್ಷದ ಬಣ ರಾಜಕೀಯ ಬೀದಿಗೆ ಬಿದ್ದಿದೆ.
ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಭಾರೀ ಫೈಟ್ ಏರ್ಪಟ್ಡಿದೆ.
ಮೂಡಿಗೆರೆ ಭಾಗದ ಜನರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಎಂ.ಪಿ.ಕುಮಾರಸ್ವಾಮಿ ಬಿಟ್ಟು ಬೇರೆ ಯಾರಿಗಾದರೂ ಟಿಕೆಟ್ ನೀಡಿ ಎಂಬ ಒತ್ತಾಯ ಕೇಳಿ ಬರುತ್ತಿದೆ.














