ಇತ್ತೀಚಿನ ಸುದ್ದಿ
ಮೂಡುಶೆಡ್ಡೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ ಪ್ರಕರಣ: 4 ಮಂದಿ ಬಂಧನ
12/05/2023, 10:47

ಮಂಗಳೂರು(reporterkarnataka.com): ನಗರದ ಹೊರವಲಯದ ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನಗನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟು ರಾಕೇಶ್ ಹಾಗೂ ಶಾಲೆ ಪದವಿನ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಎಫ್ ಐಆರ್ ದಾಖಲಿಸಲಾಗಿದೆ.
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಘೋಷಣೆ ವಾಗ್ವಾದಕ್ಕೆ ತಿರುಗಿ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿತ್ತು. ಸ್ಥಳದಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ದಾಳಿ ಕೂಡ ನಡೆದಿತ್ರು.