4:43 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮುಗಿದ 6 ತಿಂಗಳ ಗಡು: ಕೊಟ್ಟ ಮಾತಿನಂತೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಸರಕಾರಕ್ಕೆ ಹಕ್ಕೊತ್ತಾಯ

15/09/2021, 17:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಭರವಸೆಯ ನೀಡಿರುವ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.


ಅಥಣಿ ತಹಸಿಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ ಅಥಣಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜ ಸೇವಾ ಸಂಘದ ಮುಖಂಡರು ಕಳೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದಾಗಿ ಭರವಸೆ ನೀಡಿತ್ತು. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದನದಲ್ಲಿ ನಿರಂತರ ಹಕ್ಕೋತಾಯದ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಆರು ತಿಂಗಳೊಳಗಾಗಿ ಮೀಸಲಾತಿ ನೀಡುವುದಾಗಿ ತಿಳಿಸಿತ್ತು. ಈಗ ಸೆಪ್ಟೆಂಬರ್ 15ಕ್ಕೆ ಆರು ತಿಂಗಳ ಅವಧಿ ಮುಗಿಯುವುದರೊಳಗೆ ಮೀಸಲಾತಿ ಘೋಷಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.


ಇದೇ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ರಮೇಶ ಗೌಡ ಪಾಟೀಲ, ತಾಲೂಕು ಅದ್ಯಕ್ಷ ಅವಿನಾಶ ನಾಯಿಕ , ಯುವ ಘಟಕದ ಅಧ್ಯಕ್ಷ ಪರಶುರಾಮ ನಂದೇಶ್ವರ , ಮಹಿಳಾ ಘಟಕದ ಅದ್ಯಕ್ಷ ರೋಹಿಣಿ ಸಂಜೀವ ವಾಂಗಿ , ಮುಖಂಡರಾದ ಮುತ್ತಣ್ಣಾ ಸಂತ್ತಿ ,ಚಿದಾನಂದ ಪಾಟೀಲ ,ಶೀವು ಸಂಕ , ಶೀವಗೌಡಾ ನೇಮಗೌಡ,ಶೀವು  ಸಿಂದೂರ,ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು