10:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮೂಗು ತೂರಿದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಿಸುತ್ತೇವೆ: ಅಮೆರಿಕಾಕ್ಕೆ ರಷ್ಯಾ ಎಚ್ಚರಿಕೆ

06/03/2022, 13:24

ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಸದ್ಯ ಶಮನವಾಗುವ ಲಕ್ಷಣ ಕಂಡು ಬರುತ್ತಿಲ್ಲ. ಉಕ್ರೇನ್‌ ನಡುವಿನ ತನ್ನ ವಿವಾದದಲ್ಲಿ ಪಾಶ್ಚಿಮಾತ್ಯ ದೇಶಗಳು ಮೂಗುತೂರಿಸುವುದನ್ನು ನಿಲ್ಲಿಸದಿದ್ದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಣೆಯಾಗಬಹುದು ಎಂದು ರಷ್ಯಾ ಎಚ್ಚರಿಕೆ ನೀಡಿದೆ.

ರಷ್ಯಾ ಈಗಾಗಲೇ ಉಕ್ರೇನ್ ರಾಜಧಾನಿ ಕೀವ್ ಮತ್ತು ಪ್ರಮುಖ ನಗರ ಖಾರ್ಕಿವ್​ ಸೇರಿದಂತೆ ಊಕ್ರೇನ್‌ ನ ಹಲವಾರು ನಗರಗಳನ್ನು ವಶಕ್ಕೆ ಪಡೆದಿದೆ.

ಪ್ರಬಲ ರಾಷ್ಟ್ರವಾದ ರಷ್ಯಾದ ಎದುರು ಪುಟ್ಟ ದೇಶ ಉಕ್ರೇನ್‌ ದಿಟ್ಟತನದಿಂದ ಹೋರಾಡುತ್ತಿರುವುದರ ಹಿಂದೆ ಅಮೆರಿಕ, ಇಂಗ್ರೆಂಡ್‌, ಜರ್ಮನಿ ಸೇರಿದಂತೆ ಹಲವು ಬಲಾಢ್ಯ ಪಾಶ್ಚಿಮಾತ್ಯ ದೇಶಗಳಿವೆ. ಈ ದೇಶಗಳು ಉಕ್ರೇನ್‌ ಗೆ ಶಾಸ್ತ್ರಾಸ್ತ್ರ ಪೂರೈಕೆ, ಸೈನಿಕ ನೆರವು, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಬೆಂಬಲವಾಗಿನಿಂತಿವೆ. ಜೊತೆಗೆ ರಷ್ಯಾ ವಿರುದ್ಧ ಕಠಿಣ ನಿರ್ಬಂಧಗಳನ್ನು ವಿಧಿಸುವ ಮೂಲಕ ರಷ್ಯಾವನ್ನು ಜಾಗತಿಕವಾಗಿ ಏಂಕಾಂಗಿಯಾಗಿಸುವ ಪ್ರಯತ್ನದಲ್ಲಿ ತೊಡಗಿವೆ. ಈ ಎಲ್ಲಾ ಬೆಳವಣಿಗೆಗಳಿಂದ ಕೆಂಡಾಮಂಡಲವಾಗಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಪಾಶ್ಚಿಮಾತ್ಯ ದೇಶಗಳು ಉಕ್ರೇನ್-ರಷ್ಯಾ ವಿವಾದದಲ್ಲಿ ಮಧ್ಯಪ್ರವೇಶಿಸುವುದು ನಿಲ್ಲಿಸದಿದ್ದರೆ ಯುದ್ಧ ಉಕ್ರೇನ್ ಗಡಿಯಾಚೆಗೂ ವಿಸ್ತರಿಸಬಹುದು ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು