11:47 PM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್

16/09/2021, 20:24

ಮಂಗಳೂರು (ReporterKarnataka.com)

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲು ಅವಕಾಶ ಒದಗಿಸಿಕೊಟ್ಟ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಹಲವು ನಗರಗಳಲ್ಲಿ ಪ್ರತಿಭಟನೆಗಳನ್ನು ಕೈಗೊಂಡು ಆಕ್ರೋಶವನ್ನು ಹೊರಹಾಕುತ್ತಿದೆ.

ಮಂಗಳೂರು, ಮೈಸೂರು ದಾವಣಗೆರೆ ಸೇರಿದಂತೆ ಹಲವೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು ಏತನ್ಮಧ್ಯೆ ರಾಜ್ಯ ಮುಖ್ಯಮಂತ್ರಿ ಅವಸರ ಅವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸಬೇಡಿ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಹಾಗೆಯೆ ಅನೇಕ ಯುವ ಹಿಂದೂ ಕಾರ್ಯಕರ್ತರು ಬಿಜೆಪಿಯ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ಆದರೆ ಇಷ್ಟೆಲ್ಲ ಘಟನೆಗಳ ನಡುವೆ ಮುಜರಾಯಿ ಸಚಿವರಾಗಿರುವ ಶಶಿಕಲ್ಲಾ ಜೊಲ್ಲೆ ಮಾತ್ರ ತುಟಿಕ್ ಪಿಟಿಕ್ ಅಂದಿಲ್ಲ.
ಈಗ ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೆ ಶಶಿಕಲಾ ಜೊಲ್ಲೆ ಅವರೂ ಗುರಿಯಾಗಿದ್ದು, ಐತಿಹಾಸಿಕ ಚೋಳರ ಕಾಲದ ನಂಜನಗೂಡು ದೇವಾಲಯಗಳನ್ನು ನೆಲಸಮಗೊಳಿಸಿದಾಗಲೂ ಮುಜಾರಾಯಿ ಸಚಿವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡದೆ ಸುಮ್ಮನಿರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು