2:03 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಮಂಗಳೂರು ಕಾರ್ಯಕ್ರಮ ದಿಢೀರ್ ರದ್ದು: ಕೃಷ್ಣಾದಿಂದಲೇ ಪಿಎಂ ಜತೆ ವೀಡಿಯೊ ಕಾನ್ಪರೆನ್ಸ್

27/04/2022, 13:27

ಮಂಗಳೂರು(reporterkarnataka.com):

ಕೋವಿಡ್ ನಿರ್ವಹಣೆ ಕುರಿತಂತೆ ನಗರದ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಯವರೊಂದಿಗೆ ಮುಖ್ಯಮಂತ್ರಿಯವರ ವಿಡಿಯೋ ಕಾನ್ಪರೆನ್ಸ್ ರದ್ದಾಗಿದೆ. ಈ ವಿಡಿಯೋ ಸಂವಾದ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಲಾಗಿದೆ.

ಮುಖ್ಯಮಂತ್ರಿಯವರ ಈ ಮುನ್ನ ನಿಗದಿಯಾದ ಕಾರ್ಯಕ್ರಮದಂತೆ ಅವರು 27ರ ಬೆಳಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿತ್ತು. ನಂತರ

ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್‍ನಲ್ಲಿ ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವವರಿದ್ದರು. ಆದರೆ ಮಂಗಳೂರಿನಲ್ಲಿ ಆಯೋಜಿಸಿದ ವೀಡಿಯೊ ಕಾನ್ಪರೆನ್ಸ್ ರದ್ದು ಮಾಡಲಾಗಿದೆ. ಬೆಂಗಳೂರಿನಲ್ಲೇ ತನ್ನ ಗೃಹ ಕಚೇರಿ ಕೃಷ್ಣಾದಲ್ಲಿ ಅವರು ವೀಡಿಯೊ ಕಾನ್ಪರೆನ್ಸ್ ಮಾಡಲಿದ್ದಾರೆ. ಮಧ್ಯಾಹ್ನದ ಬಳಿಕ ಮೂಡಬಿದಿರೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು