ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಬೊಮ್ಮಾಯಿ 7ರಂದು ಉಡುಪಿಗೆ; ಕಾಪು ಜನಸಂಕಲ್ಪ ಸಮಾರಂಭದಲ್ಲಿ ಭಾಗಿ
05/11/2022, 18:58

ಉಡುಪಿ (reporter Karnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 7ರಂದು ಉಡುಪಿಗೆ ಆಗಮಿಸಲಿದ್ದಾರೆ.
ನ.7ರಂದು ಬೆಳಗ್ಗೆ 10:30ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಬೊಮ್ಮಾಯಿ ಆಗಮಿಸಲಿದ್ದಾರೆ. ನಂತರ ಕಾಪುವಿಗೆ ತೆರಳಿ 11 ಗಂಟೆಗೆ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಪರಾಹ್ನ 1:50ಕ್ಕೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ನಡೆಯುವ ಕರಾವಳಿಯ ಹಿರಿಯ ಪತ್ರಕರ್ತರ ಜನ್ಮಶತಮಾನೋತ್ಸವ ಸಂಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3:45ಕ್ಕೆ ಕುಂದಾಪುರ ತಾಲೂಕು ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಉಡುಪಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.