ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಮಂಗಳೂರಿಗೆ; ಕಡಲನಗರಿಯಲ್ಲಿ ಸಿಎಂಗೆ ಏನೆಲ್ಲ ಕಾರ್ಯಕ್ರಮ ಇದೆ?
27/02/2022, 15:20
ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಫೆ.28ರಂದು ಸೋಮವಾರ ಮಂಗಳೂರಿಗೆ ಆಗಮಿಸುವರು.
28ರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 3.45ಕ್ಕೆ ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
ಸಂಜೆ 4.30ಕ್ಕೆ ನಗರದ ಕುಲಶೇಖರದ ಕಾರ್ಡೆಲ್ ಹಾಲ್‍ನಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಮಂತ್ರಾಲಯ, ಭಾರತೀಯ ಹೆದ್ದಾರಿಗಳ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಆಯೋಜಿರುವ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 6 ಗಂಟೆಗೆ ಬಿಜೈನಲ್ಲಿರುವ ಒಷನ್ ಪರ್ಲ್ ಇನ್ ಹೋಟೆಲ್‍ನಲ್ಲಿ ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಕೆ.ಸಿಸಿ.ಐ) ಕರ್ನಾಟಕ- ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡುವರು.
ರಾತ್ರಿ 7.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.