7:58 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ: ವಿನಯ ಕುಮಾರ್ ಸೊರಕೆ

21/09/2021, 14:39

ಉಡುಪಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ. ಬಿಜೆಪಿಗೆ ಬೇಕಾಗಿರುವುದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ತರಹದ ನಾಯಕರು. ಹಾಗಾಗಿ ಬೊಮ್ಮಾಯಿ ಅವರು ಸಿಎಂ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತಾರೆ ಎಂದು ಹೇಳುವುದು ಕಷ್ಟ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಬೊಮ್ಮಾಯಿ ಅವರ ಜಾತ್ಯತೀತ ಮನೋಭಾವವನ್ನು ಬಿಜೆಪಿ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಮೂಲತಃ ಜನತಾ ದಳದಿಂದ ಬಂದ ಅವರು ಒಂದು ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದರು. ಅವರ ತಂದೆ ಜನತಾ ದಳದ ನಾಯಕರು ಎಂದು ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಧರ್ಮ- ದೇವರ ಬಗ್ಗೆ ಇತರರಿಗೆ ಪಾಠ ಹೇಳುವ ಬಿಜೆಪಿಯು ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದೆ. ಸರಕಾರ ಹೇಳದೆ ಯಾವುದಾದರು ಅಧಿಕಾರಿಗಳು ದೇಗುಲ ಒಡೆಯಲು ಸಾಧ್ಯವೇ ಎಂದು ಸೊರಕೆ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು