3:28 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ: ರಸ್ತೆಗಳ ಶೃಂಗಾರ; ಜನತಾ ಪರಿವಾರದ ಮಾಜಿ ನಾಯಕನ ಸ್ವಾಗತಕ್ಕೆ ಬಿಜೆಪಿ ಬಾವುಟ !!

11/08/2021, 22:11

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾರ್ಯ ತರಾತುರಿಯಿಂದ ನಡೆದಿದೆ. ಏರ್ ಪೋರ್ಟ್ ರೋಡ್ ಹಾಗೂ ಸಿಎಂ ಹಾದು ಹೋಗುವ ರಸ್ತೆಗಳಿಗೆ ಬಿಜೆಪಿ ಬಾವುಟ ಹಾರಿಸಿ ಶೃಂಗರಿಸಲಾಗಿದೆ.


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಪ್ಲೈಟ್ ನಲ್ಲಿ ಗುರುವಾರ(ಆ.12) ಬೆಳಗ್ಗೆ 10.50ಕ್ಕೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸುವರು. ಅಲ್ಲಿಂದ ಅವರು ರಸ್ತೆ ಮೂಲಕ ಸರ್ಕಿಟ್ ಹೌಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ಅವಲೋಕನ ಸಭೆ ನಡೆಸಲು ಉರ್ವ ಬಳಿಯಿರುವ ಜಿಪಂ ಕಚೇರಿಗೆ ಆಗಮಿಸುವರು. ಅದಕ್ಕಾಗಿ ತರಾತುರಿಯಲ್ಲಿ ಏರ್ ಪೋರ್ಟ್ ರೋಡ್ ತೇಪೆ ಕಾರ್ಯ ಬುಧವಾರ ನಡೆದಿದೆ. ಹಾಗೆ ಜಿಪಂ ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಭಾರಿ ತಯಾರಿ ನಡೆಸಲಾಗಿದೆ. ಸಭಾಂಗಣ ವೇದಿಕೆ ಹಿಂದುಗಡೆ ದೊಡ್ಡ ಅಕ್ಷರದಲ್ಲಿ ಮುಖ್ಯಮಂತ್ರಿಯ ಹೆಸರು ಬರೆಯಲಾಗಿದೆ. ಸಭಾಂಗಣದ ಸಿದ್ಧತೆಯನ್ನು ಸ್ವತಃ ಜಿಲ್ಲಾಧಿಕಾರಿಯವರೇ ಬುಧವಾರ ಅವಲೋಕನ ನಡೆಸಿದ್ದಾರೆ. ಲೋಪದೋಷ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡಿದ್ದಾರೆ. ಈ ನಡುವೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ದಗೊಂಡಿರುವ 32 ಬೆಡ್ ಗಳ ಐಸಿಯು ವಿಭಾಗವನ್ನು ಮುಖ್ಯಮಂತ್ರಿ ಉದ್ಘಾಟಿಸುವರು.


ಮುಖ್ಯಮಂತ್ರಿಯವರಿಗೆ ಮಧ್ಯಾಹ್ನದ ಬಳಿಕ ಉಡುಪಿಯಲ್ಲೂ ಕಾರ್ಯಕ್ರಮವಿದೆ. ಅಲ್ಲೂ ಅವರು ಕೋವಿಡ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಗುರುವಾರ ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ತಂಗಲು ಮಂಗಳೂರಿನ ಸರ್ಕಿಟ್ ಹೌಸ್ ಹಾಗೂ ಖಾಸಗಿ ಹೋಟೆಲ್ ವೊಂದರಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಿಎಂ ಅವರಿಗೆ ಕರಾವಳಿ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು