10:44 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಹೇಳಿಕೆ: ಅಥಣಿಯಿಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದೇನು? 

07/06/2021, 14:35

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಅವರು

ಮನಸ್ಸಿಗೆ ನೋವಾಗಿ ರಾಜೀನಾಮೆ ವಿಷಯ ಮಾತನಾಡಿದ್ದಾರೆ. ರಾಜ್ಯದಲ್ಲಿ ಕೆಲವರು ಅನೇಕ ದಿನಗಳಿಂದ ಪದೇ ಪದೇ ನಾಯಕತ್ವ ಬದಲಾವಣೆ   ವಿಚಾರ ಮಾತನಾಡುತ್ತಿದ್ದಾರೆ. ಇದರಿಂದ ಸಿಎಂ ನೊಂದಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಬೆಳಗಾವಿಯ ಅಥಣಿಯಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ವಿಷಯ ವಿನಾ ಕಾರಣ ಚರ್ಚೆ ಅಗುತ್ತಿದೆ. ಇದರಿಂ ಸಿಎಂ ಯಡಿಯೂರಪ್ಪನವರಿಗೆ ಬೇಜಾರಾಗಿ ರಾಜೀನಾಮೆ ವಿಷಯ ಮಾತನಾಡಿದ್ದಾರೆ ಎಂದರು.

ಉತ್ತರ ಕರ್ನಾಟಕದವರು ಸಿಎಂ ಆಗಬೇಕೆಂದು ಎಚ್ .ವಿಶ್ವನಾಥ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧಿವಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ‌. ರಾಷ್ಟ್ರೀಯ ನಾಯಕರು ತೀರ್ಮಾನ ತಗೆದುಕೊಳ್ಳುತ್ತಾರೆ ಎಂದು ಸವದಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು