7:14 PM Thursday16 - January 2025
ಬ್ರೇಕಿಂಗ್ ನ್ಯೂಸ್
ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಪೊಳಲಿ ರಾಜ ರಾಜೇಶ್ವರಿ ದೇಗುಲಕ್ಕೆ ಭೇಟಿ: ಮಂಗಳೂರಿನಲ್ಲಿ ವಾಸ್ತವ್ಯ

11/04/2022, 21:29

ಮಂಗಳೂರು(reporterkarnataka.com): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ. 12ರ ಮಂಗಳವಾರ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು

ಬೊಮ್ಮಾಯಿ ಅವರು 12 ಮತ್ತು 13ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳುವರು.

12ರಂದು ಬೆಳಿಗ್ಗೆ ಉಡುಪಿಯ ಮಣಿಪಾಲ್‍ನಿಂದ ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸುವರು.

ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯ ವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ

ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. 8.45ಕ್ಕೆ ಅಲ್ಲಿಂದ ಹಿಂತಿರುಗಿ ರಾತ್ರಿ 9.15ಕ್ಕೆ ಮಂಗಳೂರಿಗೆ ಆಗಮಿಸಿ, ನಗರದಲ್ಲಿ ವಾಸ್ತವ್ಯ ಮಾಡುವರು.

ಏ.13ರ ಬುಧವಾರ ಬೆಳಿಗ್ಗೆ 8.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಬಂಟ್ವಾಳಕ್ಕೆ ತೆರಳಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30ರವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಬಂಟ್ವಾಳದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ 1.05ಕ್ಕೆ ಬಜಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 1.40ಕ್ಕೆ ವಿಮಾನದ ಮೂಲಕ ಹೊರಟು ಮಧ್ಯಾಹ್ನ 2.35ಕ್ಕೆ ಬೆಂಗಳೂರು ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು