ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಬೊಮ್ಮಾಯಿ ಕಡಲನಗರಿ ಮಂಗಳೂರಿಗೆ ಭೇಟಿ: ಮೇರಿಹಿಲ್ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ
16/03/2023, 12:43
ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡಲನಗರಿ ಮಂಗಳೂರಿಗೆ ಗುರುವಾರ ಆಗಮಿಸಿದ್ದು, ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು.



ನಗರದ ಮೇರಿಹಿಲ್ ಹೆಲಿಪ್ಯಾಡ್ ಗೆ ಆಗಮಿಸಿದ ಅವರು ಅಲ್ಲಿ ಪೊಲೀಸರ ಗೌರವ ರಕ್ಷೆ ಸ್ವೀಕರಿಸಿದರು. ನಂತರ ಅವರು
ನಗರದ ಕರಾವಳಿ ಉತ್ಸವ ಮೈದಾನದಲ್ಲಿ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳವನ್ನು ಉದ್ಘಾಟಿಸಿದರು. ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.














