ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಬೊಮ್ಮಾಯಿಗೆ ಮಾತ್ರ ನನ್ನ ಬೆಂಬಲ, ಯಾವುದೇ ಪಕ್ಷಕ್ಕಿಲ್ಲ: ನಟ ಸುದೀಪ್ ಸ್ಪಷ್ಟನೆ
05/04/2023, 19:56

ಬೆಂಗಳೂರು(reporterkarnataka.com): ನಾನು ಯಾವುದೇ ಪಕ್ಷದ ಪರ ಅಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾನು ಬೆಂಬಲ ನೀಡುತ್ತೇನೆ. ಬೊಮ್ಮಾಯಿ ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಪ್ರಸಿದ್ಧ ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಯಾವುದೇ ಪಕ್ಷಕ್ಕೆ ನಾನು ಸೇರುವುದಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುವೆ ಎಂದೂ ಕೂಡ ಹೇಳಲಿಲ್ಲ. ಆದರೆ, ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆ ಎಂದು ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನುಡಿದರು.
ಬೊಮ್ಮಾಯಿ ಅವರಿಗೆ ಹಾಗೂ ನಮ್ಮ ಕುಟುಂಬಕ್ಕೆ ಅತ್ಯುತ್ತಮ ಸಂಬಂಧವಿದೆ. ಈ ಹಿನ್ನೆಲೆಯಲ್ಲಿ ಅವರ ಪರವಾಗಿ ಅವರಿಗೆ ಬೆಂಬಲವನ್ನು ನೀಡುತ್ತೇನೆ. ಬೊಮ್ಮಾಯಿ ಅವರು ಬೇರೆ ಪಕ್ಷದಲ್ಲಿದ್ದರೂ ಅವರಿಗೆ ಬೆಂಬಲ ನೀಡುತ್ತಿದ್ದೆ ಎಂದು ಅವರು ನುಡಿದರು.