ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರಿಗೆ ಆಗಮನ: ಉಸ್ತುವಾರಿ ಸಚಿವರಿಂದ ಸಿಎಂಗೆ ಸ್ವಾಗತ
10/12/2022, 20:27

ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಬರಮಾಡಿಕೊಂಡರು. ನಂತರ ಬೊಮ್ಮಾಯಿ ಅವರು ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡಾ ಹಾಗೂ ಸಾಂಸ್ಕೃತಿಕೋತ್ಸ ಉದ್ಘಾಟಿಸಲು ತೆರಳಿದರು.