10:05 PM Thursday19 - September 2024
ಬ್ರೇಕಿಂಗ್ ನ್ಯೂಸ್
ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಪ್ರತಿಕೃತಿಗೆ ಚಪ್ಪಲಿಯೇಟು, ಬೆಂಕಿ: ಶಾಸಕ ಯಶ್ ಪಾಲ್ ಸಹಿತ 11 ಮಂದಿ ವಿರುದ್ಧ ಎಫ್‌ಐಆರ್

09/09/2024, 23:07

ಉಡುಪಿ(reporterkarnataka.com): ಮುಖ್ಯಮಂತ್ರಿಯ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ದಹಿಸಿದ ಪ್ರಕರಣ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಿಕ್ಷಕರೊಬ್ಬರಿಗೆ ನೀಡಲಾದ ಪ್ರಶಸ್ತಿಯನ್ನು ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ವೃತ್ತದಲ್ಲಿ ಸೆ.6 ರಂದು ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ಬೆಂಕಿ ಹಚ್ಚಲಾಗಿತ್ತು.
ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಮುಖ್ಯಮಂತ್ರಿ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು.
ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಎನ್‌ಎಸ್ ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್ ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು