ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಕುರಿತು ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ: ಧರ್ಮಸ್ಥಳಕ್ಕೆ ಬರಲು ಸಿಎಂಗೆ ಆಹ್ವಾನ
14/07/2023, 21:40

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಕುರಿತು ರಾಜ್ಯಸಭೆ ಸದಸ್ಯ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ. ಹೆಗ್ಗಡೆ ಅವರು, ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತವಾದ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಸೇವೆ ಹಾಗೂ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಅವಕಾಶ ಸಿಕ್ಕಿದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆ ವ್ಯಕ್ತಪಡಿಸಿರುವ ಡಾ. ಹೆಗ್ಗಡೆ ಅವರು, ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸುತ್ತಿರುವುದು ಇಡೀ ಜೈನ ಸಮುದಾಯಕ್ಕೆ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.