ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ: ರಾಜ್ಯದ ಅನುದಾನ ಬಗ್ಗೆ ಚರ್ಚೆ
03/08/2023, 15:37

ಹೊಸದಿಲ್ಲಿ(reporterkarnataka.com): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ವಿವಿಧ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾದ ಅನುದಾನದ ಕುರಿತು ಸಿದ್ದರಾಮಯ್ಯ ಅವರು ಪ್ರಧಾನಿ ಜತೆ ಚರ್ಚೆ ನಡೆಸಿದರು. ಮುಖ್ಯಮಂತ್ರಿಯವರು ನಂತರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮೈಸೂರು ದಸರಾ ಸಂದರ್ಭದಲ್ಲಿ ನಡೆಯುವ ಏರ್ ಶೋನಲ್ಲಿ ಭಾಗವಹಿಸಲು ಆಹ್ವಾನ ನೀಡಿದರು.