8:23 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ- ಡಿಕೆಶಿ ನಡುವೆ ತೀವ್ರ ಸ್ಪರ್ಧೆ: ಇಂದು ಸಂಜೆ ಸಿಎಂ ಆಯ್ಕೆ

14/05/2023, 11:24

ಬೆಂಗಳೂರು(reporter Karnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಿಚ್ಚಳ ಬಹುಮತ ಸಾಧಿಸಿರುವ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ತೀವ್ರ ಪೈಪೋಟಿ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಸಂಬಂಧಿಸಿದಂತೆ ಫಲಿತಾಂಶ ಹೊರಬಿದ್ದ ತಕ್ಷಣ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರ ಸಭೆ ನಡೆದಿದೆ. ಪಕ್ಷಕ್ಕಾಗಿ ರಾಜ್ಯದಲ್ಲಿ ಸುತ್ತಾಡಿದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸಹಜವಾಗಿಯೇ ಮುಖ್ಯ ಮಂತ್ರಿ ರೇಸ್ ನಲ್ಲಿ ಮುಂದಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ ನಡೆಯಲಿದೆ. ಕಾಂಗ್ರೆಸ್ ನಿಂದ ಗೆದ್ದ ಶಾಸಕರನ್ನು ಬೆಂಗಳೂರಿಗೆ ಕರೆಯಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು