ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಪೊಲೀಸರಿಗೆ ದೂರು
24/05/2023, 22:13
ಬೆಳ್ತಂಗಡಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಮಂದಿ ಹಿಂದೂಗಳ ಕೊಲೆ ಮಾಡಿದವರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದೆ.
ಬೆಳ್ತಂಗಡಿಯಲ್ಲಿ ಮೇ 22ರಂದು ಆಯೋಜಿಸಿದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಹರೀಶ್ ಪೂಂಜ ಅವರು ಈ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಘಟಕ ಒತ್ತಾಯಿಸಿದೆ.
ಬೆಳ್ತಂಗಡಿ ಮಹಿಳಾ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜಾರಿ, ಉಪಾಧ್ಯಕ್ಷೆ ಮಮತಾ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ನಾಯ್ಕ್, ಕಾರ್ಯದರ್ಶಿ ಸಿಂಧೂ ಡೆನ್ನಿಸ್, ಕಸ್ತೂರಿ ಪೂಜಾರಿ, ರೇವತಿ ಉಜಿರೆ, ಕುಸುಮಾ ಮುಂತಾದವರು ಉಪಸ್ಥಿತರಿದ್ದರು.