4:53 AM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿಗಳ ಜನತಾ ದರ್ಶನ ಆರಂಭ: ಕೋಲಾರ ಜಿಲ್ಲಾಧಿಕಾರಿ, ಜಿಪಂ ಸಿಇಓ, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

08/02/2024, 21:46

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮುಖ್ಯಮಂತ್ರಿಗಳ ಮಹತ್ವದ ಜನತಾ ದರ್ಶನ ಕಾರ್ಯಕ್ರಮವು ಬೆಂಗಳೂರಿನಲ್ಲಿ ಫೆ.8ರಂದು ಯಶಸ್ವಿಯಾಗಿ ಆರಂಭವಾಯಿತು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ನೇರವಾಗಿ ಭೇಟಿ ಮಾಡಿ ಅಹವಾಲು ಸಲ್ಲಿಸುವ ಮಹತ್ವದ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಸಿಇಓ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ವಿಡಿಯೋ ಕಾನ್ಸರೆನ್ಸ್‌ನಲ್ಲಿ ಹಾಜರಾಗಿದ್ದರು.

ಕೋಲಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಸರೆನ್ಸ್‌ಲ್ಲಿ ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ ಅವರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ, ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್, ಜಿಲ್ಲಾ ಉಪವಿಭಾಗಧಿಕಾರಿ ವೆಂಕಟಲಕ್ಷ್ಮೀ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು