4:41 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು

10/07/2024, 12:21

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ್ಕಿಯಲ್ಲಿ ನಡೆದಿದೆ.

ಚಡ್ಡಿ ಗ್ಯಾಂಗ್ ನ 4 ಮಂದಿ ಸದಸ್ಯರನ್ನು ನಿನ್ನೆ ಸಕಲೇಶಪುರ ಬಳಿ ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಅವರನ್ನು ಮುಲ್ಕಿಗೆ ಸ್ಥಳ ಮಹಜರು ಮಾಡಲು ಪೊಲೀಸರು ಕರೆದುಕೊಂಡು ಬಂದ ಸಂದರ್ಭದಲ್ಲಿ ಚಡ್ಡಿ ಗ್ಯಾಂಗ್ ಸದಸ್ಯರು ಎಎಸ್ ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇಬ್ಬರ ಕಾಲಿಗೆ ಗುಂಡು ತಗುಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೋಮವಾರ ಮುಂಜಾನೆ ಚಡ್ಡಿ ಗ್ಯಾಂಗ್ ಸದಸ್ಯರು ನಗರದ ಬಿಜೈ ಸಮೀಪದ ಕೋಟೆಕಣಿಯ ಮನೆಗೆ ನುಗ್ಗಿ ಮನೆಯಲ್ಲಿದ್ದ ಗಂಡ- ಹೆಂಡತಿಯ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಸುಲಿಗೆ ಮಾಡಿ ಮನೆಯವರ ಕಾರಿನಲ್ಲೇ ಪರಾರಿಯಾಗಿದ್ದರು. ಆರೋಪಿ ಗಳೆಲ್ಲ ಮಧ್ಯಪ್ರದೇಶದ ನಿವಾಸಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು