4:15 AM Thursday22 - May 2025
ಬ್ರೇಕಿಂಗ್ ನ್ಯೂಸ್
Bangalore | ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ… Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ ಮೂಡಿಗೆರೆ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ; ಇಬ್ಬರಿಗೆ ಗಂಭೀರ ಗಾಯ ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ… ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಮಿ ಆನೆಗಳ ಹಸ್ತಾಂತರ: ಆಂಧ್ರ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… 1,600 ಕೋಟಿ ರೂ. ಕಾಮಗಾರಿ ರದ್ದು ಮಾಡದಿದ್ದರೆ ಬೆಂಗಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ:… Ex chief Minister | ಬೆಂಗಳೂರನ್ನು ನೀರಲ್ಲಿ ಮುಳುಗಿಸಿದ ಸರ್ಕಾರ: ಬಸವರಾಜ ಬೊಮ್ಮಾಯಿ… Karnataka CM | ಬೆಂಗಳೂರಿನಲ್ಲಿ ಮಳೆ ಹಾನಿ: ಮೇ 21ರಂದು ಇಡೀ ದಿನ…

ಇತ್ತೀಚಿನ ಸುದ್ದಿ

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನೆಲೆ ನಿಲ್ಲಲಿದೆ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ: ತುಮಕೂರಿನಿಂದ ಶಿಲೆ ಆಗಮನ

25/08/2022, 14:33

ಸಂತೋಷ್ ಅತ್ತಿಕೆರೆ ಚಿಕ್ಕ ಮಂಗಳೂರು

info.reporterkarnataka@gmail.com

ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ 21 ಅಡಿಯ ಬೃಹತ್ ಪರ್ವತಾಂಜನೇಯ ಮೂರ್ತಿ ನಿರ್ಮಾಣಗೊಳ್ಳಲಿದೆ. ಪಶ್ಚಿಮಘಟ್ಟಗಳ ಸಾಲಿನಲ್ಲಿರುವ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್‍ಗಂಡಿ ಎಂಬ ಸ್ಥಳದಲ್ಲಿರುವ ಆಂಜನೇಯನ ಗುಡಿ ಬಳಿ ಈ 21 ಅಡಿ ಎತ್ತರದ ಆಂಜನೇಯ ನೆಲೆ ನಿಲ್ಲಲಿದ್ದಾನೆ. ಈಗಾಗಲೇ ಮೂರ್ತಿ ಕೆತ್ತನೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಸಿದ್ಧತೆ ನಡೆದಿದ್ದು, ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಕೃಷ್ಣಶಿಲೆ ಕಲ್ಲುಗಳು ಕೂಡ ಚಿಕ್ಕಮಗಳೂರು ನಗರಕ್ಕೆ ಆಗಮಿಸಿವೆ. ನಗರದ ದ್ವಾರಬಾಗಿಲು ದಾಸರಹಳ್ಳಿ ಬಳಿ ಕಲ್ಲುಗಳಿಗೆ ಪೂಜೆ ಮಾಡಿ ಪುರಪ್ರವೇಶ ಮಾಡಿಕೊಳ್ಳಲಿದ್ದಾರೆ. ಕಲ್ಲಿನ ಜೊತೆ ಶಿಲ್ಪಿಗಳೂ ಕೂಡ ಆಗಮಿಸಿದ್ದಾರೆ.


ಮೂರ್ತಿಯನ್ನ ಪ್ರತಿಷ್ಠಾಪಿಸುವ ಜಾಗದಲ್ಲೇ ಕೆತ್ತನೇ ಮಾಡಬೇಕೋ ಅಥವ ಬೇರೇಡೆ ಕೆತ್ತನೆ ಮಾಡಿ ಅಲ್ಲಿಗೆ ಕೊಂಡೊಯ್ದು ಪ್ರತಿಷ್ಠಾಪಿಸಬೇಕೋ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಮೂರ್ತಿ ಕವಿಕಲ್‍ಗಂಡಿ ಬಳಿ ನೆಲೆ ನಿಂತರೇ ಸುತ್ತಮುತ್ತಲಿನ ಸುಮಾರು 30 ಕಿ.ಮೀ. ದೂರಕ್ಕೂ ಈ ಮೂರ್ತಿ ಕಾಣುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈಗಾಗಲೇ ಸಾವಿರಾರು ಭಕ್ತರು ದತ್ತಪೀಠಕ್ಕೆ ಬಂದು ಪ್ರಕೃತಿ ಮಧ್ಯೆ ನೆಲೆಸಿರುವ ದತ್ತಾತ್ತೇಯರ ದರ್ಶನ ಮಾಡುತ್ತಿದ್ದಾರೆ. ಈ ಮೂರ್ತಿ ನೆಲೆ ನಿಂತರೇ ಕಾಫಿನಾಡು ದೇಶದ ಅತ್ಯಂತ ಹೆಸರಾಂತ ಪ್ರವಾಸಿ ತಾಣವಾಗೋದ್ರಲ್ಲಿ ಯಾವುದೇ ಅನುಮಾನವಿಲ್ಲ. ದೇಶಾದ್ಯಂತ ಇರೋ ಲಕ್ಷಾಂತರ ಆಂಜನೇಯ ಭಕ್ತರು ಕಾಫಿನಾಡ ಪ್ರಕೃತಿ ಸೌಂದರ್ಯದ ಆಂಜನೇಯ ದರ್ಶನವನ್ನೂ ಪಡೆಯಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು