ಇತ್ತೀಚಿನ ಸುದ್ದಿ
ಮುಳ್ಳಯ್ಯನಗಿರಿ ಬೆಟ್ಟದಿಂದ ಪ್ರಪಾತಕ್ಕೆ ಉರುಳಿ ಬಿದ್ದ ಕಾರು: ಮೈಸೂರಿನ 4 ಮಂದಿ ಗಂಭೀರ ಗಾಯ; ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ
17/05/2023, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮುಳ್ಳಯ್ಯನಗಿರಿ ಪರ್ವತದ ತುದಿಯ ರಸ್ತೆಯಿಂದ
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ
ಪ್ರಪಾತಕ್ಕೆ ಬಿದ್ದ ಪರಿಣಾಮ ಮೈಸೂರಿನ 4 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಮೈಸೂರಿನ ಕೆ.ಆರ್. ನಗರದಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದ ಸೀತಾರಾಮ್, ಸುಗುಣ, ಶ್ರೇಯಸ್, ಶುಭಾ ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ
ಪ್ರವಾಸ ಮುಗಿಸಿ ವಾಪಸ್ ತೆರಳುವಾಗ ಕಾರು
ಪ್ರಪಾತಕ್ಕೆ ಬಿದ್ದಿದೆ.
ಚಿಕ್ಕಮಗಳೂರು ತಾಲೂಕಿನ ಕವಿಕಲ್ ಗಂಡಿ ಬಳಿ ಜಾಗರ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಗಾಯಳುಗಳು ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.