8:41 PM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

Mumbai Attack | ಮುಂಬೈ ದಾಳಿಯ ಮಾಸ್ಟರ್ ಮೈಂಡ್ ರಾಣಾ ಭಾರತಕ್ಕೆ ಹಸ್ತಾಂತರ: ಮೋದಿ ಸರಕಾರ ಶ್ಲಾಘಿಸಿದ ಕಾಂಗ್ರೆಸ್ ನಾಯಕ ಶಿಂಧೆ

12/04/2025, 15:03

ನವದೆಹಲಿ(reporterkarnataka.com): 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವ್ವೂರ್ ರಾಣಾನನ್ನು ಭಾರತಕ್ಕೆ ಕರೆದು ತಂದಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ಶ್ಲಾಘಿಸಿದ್ದಾರೆ.
ನಾವು ಆತನನ್ನು ಕರೆತರಲು ಪ್ರಯತ್ನಿಸಿದ್ದೆವು.ಬಿಜೆಪಿ ಸರ್ಕಾರ ಕೂಡ ಅವರನ್ನು ಭಾರತಕ್ಕೆ ಮರಳಿ ಕರೆತರಲು ಬಹಳ ಸಮಯದಿಂದ ಪ್ರಯತ್ನಿಸುತ್ತಿತ್ತು. ಈಗ ನಾವು ಅವನನ್ನು ಮರಳಿ ಕರೆತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಶಿಂಧೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಎನ್‌ಐಎ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸವಿದೆ. ಪ್ರಧಾನಿ ಮೋದಿ ಆಗಲಿ ಅಥವಾ ಭಾರತ ಸರ್ಕಾರವಾಗಲಿ, ಹೇಗಾದರೂ ತಹವ್ವೂರ್‌ನನ್ನು ಇಲ್ಲಿಗೆ ಕರೆದು ತಂದಿರುವುದು ಸಂತೋಷದ ವಿಷಯ ಎಂದು ಶಿಂಧೆ ಹೇಳಿದ್ದಾರೆ.
ತನಿಖೆಯ ನಂತರ ಎಲ್ಲಾ ಸತ್ಯ ಹೊರಬರುತ್ತದೆ. ಈ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ನಾವು ಕೇಂದ್ರ ಸರ್ಕಾರವನ್ನು ಹೊಗಳುತ್ತೇವೆ. ಆದರೆ ಅವರನ್ನು ಹೊಗಳುವುದರಲ್ಲಿ ಯಾವುದೇ ತಪ್ಪಿಲ್ಲ. ಏಕೆಂದರೆ ಇದು ದೀರ್ಘಕಾಲದ ಸಮಸ್ಯೆಯಾಗಿತ್ತು ಎಂದು ಮಾಜಿ ಗೃಹ ಸಚಿವರೂ ಆಗಿರುವ ಶಿಂಧೆ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು