2:18 PM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಮುಂಬರುವ ಚುನಾವಣೆ; ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಮತ್ತೆ ಅಧಿಕಾರಕ್ಕೆ: ಅಮಿತ್ ಶಾ ವಿಶ್ವಾಸ

02/09/2021, 22:59

ದಾವಣಗೆರೆ(reporterkarnataka.com):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆಯ ಜಿಎಂಐಟಿ ಆವರಣದಲ್ಲಿ ಗುರುವಾರ ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೊಮ್ಮಾಯಿ ಅವರು ಸಾರ್ವಜನಿಕ ಜೀವನದಲ್ಲಿ, ಆಡಳಿತದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.

ಯಡಿಯೂರಪ್ಪಜೀ ಅವರೇ ಕರ್ನಾಟಕ ಬಿಜೆಪಿಯ ನಾಯಕತ್ವವನ್ನು ಬೇರೆಯವರಿಗೆ ವಹಿಸುವ ಕುರಿತು ತೀರ್ಮಾನ ಕೈಗೊಂಡರು. ಬಿಜೆಪಿಯು ಬಸವರಾಜ ಬೊಮ್ಮಾಯಿ ಅವರಿಗೆ ನೂತನ ಮುಖ್ಯಮಂತ್ರಿಯ ಜವಾಬ್ದಾರಿ ವಹಿಸಲು ನಿರ್ಣಯಿಸಿತು. ಅದರಂತೆ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಎಂದು ಶಾ ನುಡಿದರು.

ಕರ್ನಾಟಕದ ಅಭಿವೃದ್ಧಿಗೆ ವಿಶೇಷವಾಗಿ ರೈತರ ಮತ್ತು ಹಳ್ಳಿಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರು ತನ್ನ ಎರಡು ಅವಧಿಯಲ್ಲಿಯೂ ಹೆಚ್ಚಿನ ಒತ್ತು ನೀಡಿದರು. ಇದೀಗ ಬೊಮ್ಮಾಯಿ ಅವರು ಹಲವು  ಮಹತ್ವಪೂರ್ಣವಾದ ಹೊಸ ಉಪಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಪೊಲೀಸರ ಗೌರವ ವಂದನೆ, ಹೂಗುಚ್ಛ ಸೇರಿ ಹಲವು ವಿವಿಐಪಿ ಸಂಸ್ಕೃತಿಗೆ ತಿಲಾಂಜಲಿ ಇತ್ತಿದ್ದಾರೆ. ಪಾರದರ್ಶಕತೆ ತರಲು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು