7:53 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ: ಪ್ರಮೋದ್ ಮಧ್ವರಾಜ್

05/08/2023, 13:51

ಉಡುಪಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಘೋಷಿಸಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಜನರ ಬಾಯಿಯಲ್ಲಿ ತಾನು ಬಿಜೆಪಿ ತ್ಯಜಿಸುವ ಅಪಪ್ರಚಾರ ನಡೆಯುತ್ತಿದೆ. ನಾನು ರಾಜಕೀಯ ನಿವೃತ್ತಿಯಾಗುವವರೆಗೆ ಅಥವಾ ನನ್ನ ದೇಹಾಂತ್ಯವಾಗುವವರೆಗೂ ನಾನು ಬಿಜೆಪಿಯಲ್ಲಿ ಮುಂದುವರಿಯುತ್ತೇನೆ. ಆ ಮೂಲಕ ನನ್ನ ಕುರಿತಾದ ಅಪಪ್ರಚಾರಕ್ಕೆ ತೆರೆ ಎಳೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ನುಡಿದರು.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ನನಗೆ ಟಿಕೆಟ್ ಕೊಡುವ ಬಗ್ಗೆ ಸ್ವಲ್ಪ ಮಟ್ಟಿಗೆ ವಿಶ್ವಾಸವಿದೆ. ಆದರೆ ಪೂರ್ಣ ವಿಶ್ವಾಸವಿಲ್ಲ. ಯಾಕೆಂದರೆ ನನಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದ ಯಾವುದೇ ನಾಯಕರು ಭರವಸೆ ನೀಡಿಲ್ಲ. ನಾನು ಬಿಜೆಪಿ ಸೇರಿ ಹಲವು ತಿಂಗಳಾದರೂ ಪಕ್ಷ ನನಗೆ ಯಾವುದೇ ಪ್ರಮುಖ ಜವಾಬ್ದಾರಿ ಕೊಟ್ಟಿಲ್ಲ. ವಿಧಾನಸಭೆ ಚುನಾವಣೆಗೆ ಒಂದು ತಿಂಗಳ ಮುನ್ನ ಕಾರವಾರ, ಭಟ್ಕಳ, ಬೈಂದೂರು, ಉಡುಪಿ, ಕುಂದಾಪುರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಲು ಪಕ್ಷ ಸೂಚಿಸಿತ್ತು. ಅಲೆಲ್ಲ ಅಳಿಲ ಸೇವೆ ಮಾಡಿದ್ದೇನೆ ಎಂದು ಅವರು ಹೇಳಿದರು.
ಉಡುಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016-18ರ ಅವಧಿಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿತ್ತು ಎಂದು ಹೇಳಿದ್ದಾರೆ. ಕಾನೂನು- ಸುವ್ಯವಸ್ಥೆ ಯಲ್ಲೂ ಉಡುಪಿ ಪ್ರಥಮ ಸ್ಥಾನದಲ್ಲಿತ್ತು. ಆ ಅವಧಿಯಲ್ಲಿ ನಾನು ಉಸ್ತುವಾರಿ ಸಚಿವನಾಗಿದ್ದೆ. ಬಿಜೆಪಿ ನನ್ನ ಟ್ರ್ಯಾಕ್ ರೆಕಾರ್ಡ್ ಅವಲೋಕಿಸಿ ನನಗೆ ಟಿಕೆಟ್ ನೀಡುವ ಭರವಸೆ ಇದೆ. ನನಗೆ ಟಿಕೆಟ್ ನೀಡದಿದ್ದರೆ, ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು