9:11 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಂಟೀ ಸ್ಪರ್ಧೆ: ಪ್ರತಿಪಕ್ಷಗಳ ಒಕ್ಕೂಟ ‘ಇಂಡಿಯಾ’ ನಿರ್ಣಯ

01/09/2023, 20:47

ಮುಂಬೈ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಲೋಕಸಭೆ ಚುನಾವಣೆಯಲ್ಲಿ ಸಾಧ್ಯವಾದಷ್ಟು ಸೀಟುಗಳಲ್ಲಿ ಒಟ್ಟಿಗೆ ಸ್ಪರ್ಧಿಸಲು ಮುಂಬೈನಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಂಡಿತು
ಬಿಹಾರದ ಪಾಟ್ನಾ ಹಾಗೂ ಬೆಂಗಳೂರಿನಲ್ಲಿ ಈಗಾಗಲೇ ಪ್ರತಿಪಕ್ಷಗಳ ನಾಯಕರು ಎರಡು ಸಭೆಗಳನ್ನು ಮಾಡಿದ್ದು, ಗುರುವಾರದಿಂದ ಮುಂಬೈನಲ್ಲಿ ಮೂರನೇ ಸಭೆ ನಡೆಯಿತು. ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಪ್ರತಿಪಕ್ಷಗಳು ಜಂಟಿಯಾಗಿ ಸ್ಪರ್ಧೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿದ್ದೇವೆ ಎಂದು ಇಂಡಿಯಾ ನಾಯಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.


ಇದರ ಜೊತೆಗೆ, ವಿವಿಧ ರಾಜ್ಯಗಳಲ್ಲಿ ಸೀಟು ಹಂಚಿಕೆಯ ಪ್ರಕ್ರಿಯೆ ತಕ್ಷಣವೇ ಪ್ರಾರಂಭಿಸಲಾಗುತ್ತದೆ. ಅದಷ್ಟು ಬೇಗ ಸೀಟು ಕೊಡು-ಕೊಳ್ಳುವಿಕೆಯ ಪ್ರಕ್ರಿಯೆಯನ್ನು ಸಹಕಾರಿ ಮನೋಭಾವದಲ್ಲಿ ಮುಗಿಸಲಾಗುತ್ತದೆ. ಸಾರ್ವಜನಿಕರ ಸಮಸ್ಯೆಯ ವಿಷಯಗಳನ್ನು ಮುಂದಿಟ್ಟುಕೊಂಡು ದೇಶದ ವಿವಿಧ ಭಾಗಗಳಲ್ಲಿ ಶೀಘ್ರವೇ ರ್ಯಾಲಿಗಳನ್ನೂ ನಡೆಸುತ್ತೇವೆ. ವಿವಿಧ ಭಾಷೆಗಳಲ್ಲಿ ‘ಜುಡೇಗಾ ಭಾರತ್, ಜೀತೇಗಾ ಇಂಡಿಯಾ’ ಎಂಬ ವಿಷಯದ ಕುರಿತು ತಮ್ಮ ಸಂವಹನ ತಂತ್ರಗಳು, ಪ್ರಚಾರಗಳನ್ನು ಸಂಘಟಿಸಲು ನಿರ್ಣಯಿಸಲಾಗಿದೆ ಎಂದ ಹೇಳಿಕೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು