ಇತ್ತೀಚಿನ ಸುದ್ದಿ
ಮುಂಬರುವ ಸಂಸತ್, ಬಿಬಿಎಂಪಿ, ಜಿಪಂ-ತಾಪಂ ಚುನಾವಣೆಗೆ ತಯಾರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ
03/09/2023, 22:34
ಬೆಂಗಳೂರು(reporterkarnataka.com): ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಹಾಗೂ ಬೃಹತ್ ಮತ್ತು ಮಾಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಸಮಿತಿಯ ಪ್ರತಿನಿಧಿ ಗಳು ಸಭೆಯಲ್ಲಿ ಪಾಲ್ಗೊಂಡಿದ್ದು, ಈ ಸಭೆಯಲ್ಲಿ ಮುಂಬರುವ ಲೋಕಸಭಾ, ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್, ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಪೂರ್ವ ತಯಾರಿ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ಬಿ ಎಲ್ ಶಂಕರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮಾಜಿ ಸಚಿವ ಕಿಮ್ಮನ ರತ್ನಾಕರ್, ಮಾಜಿ ಶಾಸಕ ಯತೀಂದ್ರ ಸಿದ್ರಾಮಯ್ಯ, ರಮೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಸುಧಾಮ್ ದಾಸ್, ತೀರ್ಥಹಳ್ಳಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.