ಇತ್ತೀಚಿನ ಸುದ್ದಿ
ಮುಂಬರುವ ವಿಧಾನಸಭೆ ಚುನಾವಣೆ:ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಡಿಕೆಶಿ ಚಿಂತನೆ; ಜಿಲ್ಲಾಧ್ಯಕ್ಷರುಗಳ ಬದಲಾವಣೆ?
23/06/2021, 07:52
ಬೆಂಗಳೂರು(reporterkarnataka news): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಬದಲಾವಣೆಗೆ ಚಿಂತನೆ ನಡೆದಿದೆ. 2023ರ ವಿಧಾನಸಭೆ ಚುನಾವಣೆಗೆ ಸಜ್ಜಾಗಲು ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಮಂಗಳವಾರ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಈ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷರ ಬದಲಾವಣೆ, ಕೆಪಿಸಿಸಿ ಪುನರ್ ರಚನೆ ಹಾಗೂ ಪಕ್ಷವನ್ನು ಕೇಡರ್ ಬೇಸ್ ನಲ್ಲಿ ಸಂಘಟಿಸುವ ಬಗ್ಗೆ ಶಿವಕುಮಾರ್ ಅವರು ಸುರ್ಜೇವಾಲರ ಜತೆ ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಕೂಡ ಪ್ರಸ್ತಾಪಿಸಲಾಗಿದೆ ಎಂದು ತಿಳಿದು ಬಂದಿದೆ.