2:50 PM Thursday15 - May 2025
ಬ್ರೇಕಿಂಗ್ ನ್ಯೂಸ್
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.…

ಇತ್ತೀಚಿನ ಸುದ್ದಿ

ಮುಂಬರುವ ವಿಧಾನಸಭೆ ಚುನಾವಣೆ: ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ನಿಂದ ಪ್ರತ್ಯೇಕ ಚುನಾವಣಾ ಪ್ರಣಾಳಿಕೆ

21/01/2023, 23:39

ಮಂಗಳೂರು(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕಕ್ಕೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದರು.

ಕಾಂಗ್ರೆಸ್ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಸಿಸಿಐ, ಕ್ರೆಡೈಯಲ್, ರೈತರು, ಅಡಿಕೆ ಬೆಳೆಗಾರರು, ಮೀನುಗಾರರು, ರಿಕ್ಷಾ, ಬಸ್, ವಿದ್ಯಾರ್ಥಿ ಮತ್ತು ಎನ್‌ಜಿಒ ಸಂಘಟನೆಗಳು ಹಾಗೂ ಪಂಚಾಯತ್‌ರಾಜ್ ವ್ಯವಸ್ಥೆಯ ಸಂಘಟನೆಗಳ ಮುಖಂಡರ ಜತೆ ಇಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತೀಯ ಭಾವನೆ ಕೆರಳಿಸಿ ಅಶಾಂತಿ ಸೃಷ್ಟಿಸಿರುವುದನ್ನು ಅಲ್ಲಗಳೆಯುವಂತಿಲ್ಲ. ಅದಕ್ಕೆ ಕಡಿವಾಣ ಹಾಕಿ ಶಾಂತಿ ನೆಲೆಸಲು ಪ್ರಯತ್ನ ಮಾಡಬೇಕಿದೆ. ಕಾಂಗ್ರೆಸ್ ಎಂದೂ ಕೂಡ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಅಧಿಕಾರಕ್ಕೆ ಬಂದ ಬಳಿಕ ಈಡೇರಿಸಲು ಸಾಧ್ಯವಾಗುವಂತಹ ಭರವಸೆಗಳನ್ನು ಮಾತ್ರ ಪ್ರಣಾಳಿಕೆಯಲ್ಲಿ ಸೇರಿಸಲಾಗುತ್ತದೆ. 200 ಯುನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಭರವಸೆಯನ್ನು ನೀಡಲಾಗಿದೆ. ಹಣಕಾಸಿನ ಲೆಕ್ಕಾಚಾರ ಹಾಕಿಯೇ ಇದನ್ನು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ಶೇ 40 ಕಮಿಷನ್ ಆರೋಪ ಈಗಲೂ ಕೇಳಿ ಬರುತ್ತಿವೆ. ಗುತ್ತಿಗೆದಾರರ ಸಂಘಟನೆಗಳ ಮುಖಂಡರು ಈ ಬಗ್ಗೆ ಪ್ರಧಾನಿಗೆ ದೂರು ನೀಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದರು.
ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಆದರೆ ಭಿನ್ನ ಅಭಿಪ್ರಾಯವಿದೆ. ಅದು ಸಹಜವಾದುದು. ಅದನ್ನು ಸರಿಪಡಿಸಿಕೊಂಡು ಚುನಾವಣೆಯನ್ನು ಎದುರಿಸಲಾಗುವುದು. ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೇರಲಿದೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರಕಾರ ರಚಿಸುವಂತಹ ವಾತಾವರಣ ಸೃಷ್ಟಿಯಾಗದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತ್ ಜೋಡೋ ಯಾತ್ರೆಯಿಂದ ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ವ್ಯಕ್ತಿತ್ವದಲ್ಲಿ ಭಾರಿ ಬದಲಾವಣೆಯಾಗಿದೆ ಎಂಬ ಮಾತು ರಾಜಕೀಯ ವಿಶ್ಲೇಷಕರಿಂದ ಕೇಳಿ ಬರುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಆಗಿದೆ ಎಂದರು.

ರಾಜ್ಯ ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಮಧು ಬಂಗಾರಪ್ಪ, ಜೆ.ಆರ್.ಲೋಬೊ, ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಮುಖಂಡರಾದ ಜಿ.ಎ.ಬಾವಾ, ಇಬ್ರಾಹೀಂ ಕೋಡಿಜಾಲ್, ಕವಿತಾ ಸನಿಲ್, ಪ್ರೊ. ರಾಧಾಕೃಷ್ಣ, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೆ.ಕೆ.ಶಾಹುಲ್ ಹಮೀದ್, ಕೃಪಾ ಆಳ್ವ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು