10:12 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ ಗ್ಯಾರಂಟಿ: ಉಡುಪಿಯಲ್ಲಿ ಅಣ್ಣಾಮಲೈ ಭವಿಷ್ಯ

28/02/2023, 08:52

ಉಡುಪಿ(reporterkarnataka.com):
ಅಭಿವೃದ್ಧಿಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಿಂದ ಹೊರಗೆ ನಿಂತು ನೋಡಿದಾಗ ಅಭಿವೃದ್ಧಿ ತಿಳಿಯುತ್ತದೆ. ಹಾಗೆ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕರ್ನಾಟಕ ವಿಧಾನಸಭಾ ಚುನಾವಣೆಯ ರಾಜ್ಯ ಸಹ ಉಸ್ತುವಾರಿ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಸೊಮವಾರ ಭೇಟಿ ನೀಡಿದ್ದ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿದೆ. ಮುಂದಿನ ಎಂಪಿ ಚುನಾವಣೆಗೆ ಕರ್ನಾಟಕ ಬಜೆಟ್ ನ ಶೇ 10 ಬಳಸುವ ಯೋಚನೆ ಮಾಡಿದೆ. ಬಾಯಿ ಇರುವುದು ಮಾತಾಡಲು, ಸುಳ್ಳು ಹೇಳಲು ಅಲ್ಲ ಎಂಬುದನ್ನು ಕಾಂಗ್ರೆಸ್ ತಿಳಿದುಕೊಳ್ಳಬೇಕು ಎಂದರು.
ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ ಐದು ‘ಪ್ರಗತಿ ರಥ‘ಗಳಿಗೆ ರಾಜ್ಯ ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಚಾಲನೆ ನೀಡಿದರು.

ಶಾಸಕರಾದ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಉಡುಪಿ ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕ ಮಾತನಾಡಿದರು. ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿದರು. ಸದಾನಂದ ಉಪ್ಪಿನಕುದ್ರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು