1:18 AM Thursday16 - January 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ… ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮುಂದಿನ ಡಿಸೆಂಬರ್ ನೊಳಗೆ ಸ್ಮಾಟ್‍ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವರ ಸೂಚನೆ

22/04/2022, 20:07

ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅವರು ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ಮಾರ್ಟ್ ಸಿಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

930 ಕೋಟಿ ರೂ.ಗಳ ವೆಚ್ಚದಲ್ಲಿ ಮಂಗಳೂರು ನಗರದಲ್ಲಿ ವಿವಿಧ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗುತ್ತಿದೆ. ಅವುಗಳು ಮುಂಬರುವ ಡಿಸೆಂಬರ್‍ನೊಳಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ನಗರದಲ್ಲಿ ಕೈಗೊಳ್ಳಲಾಗಿರುವ ಯುಜಿಡಿಯ ಅಂದಾಜು 42 ಕಿ.ಮೀ ಕಾಮಗಾರಿಗಳ ಪೈಕಿ 22 ಕಿ.ಮೀ ಉದ್ದದ ಕಾಮಗಾರಿ ಪೂರ್ಣಗೊಂಡಿದೆ, ಅದರಂತೆ ಮಂಗಳಾ ಕ್ರೀಡಾಂಗಣದ ಕ್ರೀಡಾ ಸಂಕಿರ್ಣದಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳು ಹಾಗೂ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದರು. 

ಈ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು ನೀಡಿರುವ ಮಾಹಿತಿ ಹಾಗೂ ಸ್ಥಳದಲ್ಲಿ ಆದ ಅನುಷ್ಠಾನದಲ್ಲಿ ವ್ಯತ್ಯಾಸಗಳಿದ್ದರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ ಸಚಿವರು, ಯು.ಜಿ.ಡಿ ಕಾಮಗಾರಿ ಅನುಷ್ಠಾನದಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು,  ಯೋಜನೆಗಳ ಅನುಷ್ಠಾನಕ್ಕೆ ಸ್ಥಳದಲ್ಲಿರುವ ಸವಾಲುಗಳನ್ನು ಅಧಿಕಾರಿಗಳು ತಿಳಿಸಬೇಕು, ಸಮಸ್ಯೆಗಳಿದ್ದರೆ ಚರ್ಚೆ ಮಾಡಿ ಅವುಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ರಾಜ್ಯಮಟ್ಟದಲ್ಲಿ ಬಗೆಹರಿಸುವ ಸಮಸ್ಯೆಗಳಿದ್ದರೆ ಗಮನಕ್ಕೆ ತರುವಂತೆ ಸಚಿವರು ತಿಳಿಸಿದರು. 

ಮುಂದಿನ ಬಾರಿ ಯುಜಿಡಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ, ಮಂಗಳಾ ಕ್ರೀಡಾಂಗಣದ ಕ್ರೀಡಾ ಸಂಕಿರ್ಣ ಹಾಗೂ ತಣ್ಣೀರು ಬಾವಿ ಬೀಚ್‍ಗಳಿಗೆ ಭೇಟಿ ನೀಡಲಾಗುವುದು ಎಂದ ಸಚಿವರು, ಮೀನುಗಾರಿಕೆ ಕಾಲೇಜು ಹಾಗೂ ಗೇಲ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು. 

ಶಾಸಕರಾದ ಡಾ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಳಾ ರಾವ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಪ್ರಶಾಂತ್ ಮಿಶ್ರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವೇದಿಕೆಯಲ್ಲಿದ್ದರು. 
ರಿಪೋರ್ಟರ್ ಕರ್ನಾಟಕ ಬುಧವಾರ ‘ಪ್ರಭಾರ ಎಂಡಿ:
ಕುಂಟಿತ್ತಿದೆ ಸ್ಮಾರ್ಟ್ ಸಿಟಿ ಬಂಡಿ’ ಎಂಬ ಶೀರ್ಷಿಕೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕುರಿತು ವರದಿ ಪ್ರಕಟಿಸಿತ್ತು.ಮುಂದಿನ ಡಿಸೆಂಬರ್ ನೊಳಗೆ ಸ್ಮಾಟ್‍ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವರ ಸೂಚನೆ

ಇತ್ತೀಚಿನ ಸುದ್ದಿ

ಜಾಹೀರಾತು