6:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಹಸಿರು ಉಳಿಸುವುದು ಅಗತ್ಯ: ಮಹಾದೇವಪ್ಪ

22/08/2021, 10:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ಪ್ರಕೃತಿಯ ಸಂಪತ್ತು ಹಸಿರಾಗಿರಲು ಕಾರಣರಾಗಿರುವ ನಾವು ನಮ್ಮ ಉಸಿರು ಉಳಿಯಲು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಮುಂದಿನ ತಲೆಮಾರಿಗೆ ಪ್ರಕೃತಿ ಸಂಪತ್ತು ಕೊಡುಗೆ ಏನೆಂಬುದನ್ನು ತಿಳಿಸಬೇಕೆಂದು ತಾಲೂಕು ಶಿಕ್ಷಣಾಧಿಕಾರಿ ಮಹಾದೇವಪ್ಪ ಹೇಳಿದರು

ನಾಗಮಂಗಲ ಸಿಟಿ ಲಯನ್ಸ್ ಕ್ಲಬ್ ಉಪ್ಪಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಪ್ರಜೆಗಳು ಕೊರೊನಾ ಸಂಕಟದಿಂದ ಆಗಿರುವ ಅನಾಹುತಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ದಿನಗಳಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಪ್ರತಿಯೊಬ್ಬರು ಗಿಡಮರಗಳನ್ನು ಪೋಷಣೆ ಮಾಡುವ ಮುಖಾಂತರ ಕಾಡು ಉಳಿಸಿ ನಾಡು ಬೆಳೆಸಿ ಪರಿಪಾಠ ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು.

ಗಿಡ ಮರಗಳನ್ನು ಸಸಿಗಳನ್ನು ನೀಡುವುದರ ಜೊತೆಗೆ ಅವುಗಳ ಪೋಷಣೆಗಳನ್ನು ದಯಮಾಡಿ ಮುಂದೆ ಕಾಪಾಡಿಕೊಂಡು ಹೋಗಬೇಕೆಂದು ತಿಳಿಸಿದರು.

ಪ್ರಕೃತಿಯ ವರದಾನವಾಗಿರುವ ಪರಿಸರವನ್ನು ಎಲ್ಲರೂ ಸಂರಕ್ಷಿಸುವ ಹೂಣೆ ನಮ್ಮದಾಗಿದೆ ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ನಂದ ಕಿಶೋರ್ ಹಾಗೂ ಲಯನ್ಸ್ ರವರುಗಳಾದ ಗೀತಾದಾಸೇಗೌಡ, ವಸಂತ ಶ್ರೀಕಂಠಯ್ಯ ಜೆ.ಸಿ ನಂಜುಂಡೇಗೌಡ, ಬಸವೇಗೌಡ, ಉಗ್ರೇಗೌಡ ಅನೇಕ ಗಣ್ಯರು ಹಾಜರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು