2:35 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಮುಂದಿನ ವಾರ ‘ಅಸನಿ’ ಚಂಡಮಾರುತ ಅಪ್ಪಳಿಸುವ ಭೀತಿ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

17/03/2022, 18:28

ಹೊಸದಿಲ್ಲಿ(reporterkarnataka.com) : ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ವಾರ ಅಸನಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಅಸನಿ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್​​ ಕಡೆಗೆ ಚಲಿಸಲಿದೆ.

ಹಿಂದೂ ಸಾಗರದಲ್ಲಿ ಕಡಿಮೆ ಒತ್ತಡ ವಾತಾವರಣ ಪರಿಸ್ಥಿತಿ ರಚಿತಗೊಂಡಿದ್ದು, ಚಂಡ ಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದು ಅಂಡಮಾನ್​-ನಿಕೋಬಾರ್​ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಸನಿ ಚಂಡಮಾರುತ ಮಾರ್ಚ್​ 21ರಂದು ತೀವ್ರಗೊಂಡು, ಮಾರ್ಚ್​ 22ರವರೆಗೂ ಉತ್ತರ, ವಾಯುವ್ಯದತ್ತ ಚಲಿಸಲಿದೆ. ಚಂಡ ಮಾರುತ ಉತ್ತರ-ವಾಯುವ್ಯದ ಕಡೆಗೆ ಚಲಿಸಿ ಬಾಂಗ್ಲಾದೇಶದ ಸಮೀಪ ತಲುಪಲಿದೆ. ಮಾರ್ಚ್​ 23ರಷ್ಟರಲ್ಲಿ ಉತ್ತರ ಮ್ಯಾನ್ಮಾರ್​​ ಕರಾವಳಿ ತಲುಪುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಬಂಗಾಳಕೊಲ್ಲಿಯ ದಕ್ಷಿಣ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು