1:31 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಂದಿನ ವರ್ಷ ಭೀಕರ ಜಾಗತಿಕ ಆರ್ಥಿಕ ಹಿಂಜರಿತ : ವಿಶ್ವ ಬ್ಯಾಂಕ್‌ ಎಚ್ಚರಿಕೆ

17/09/2022, 20:03

ಹೊಸದಿಲ್ಲಿ(reporterkarnataka.com): ಮುಂದಿನ ವರ್ಷ ಜಾಗತಿಕ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಲಿದೆ ಎಂದು ವಿಶ್ವ ಬ್ಯಾಂಕ್‌ ಮುಖ್ಯಸ್ಥ ಡೇವಿಡ್‌ ಮಾಲ್ಪಾಸ್‌ ಹೇಳಿದ್ದಾರೆ. ಒಂದುಕಡೆ ಜಗತ್ತಿನ ಎಲ್ಲ ದೇಶಗಳ ಕೇಂದ್ರ ಬ್ಯಾಂಕ್‌ಗಳು ಹಣದುಬ್ಬರ ನಿಯಂತ್ರಿಸಲು ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿವೆ.

ಇದರ ಅಡ್ಡ ಪರಿಣಾಮವೆಂಬಂತೆ ಹೂಡಿಕೆ ಮೇಲೆ ಹೊಡೆತವುಂಟಾಗಿದೆ. ಉದ್ಯೋಗನಷ್ಟ ಸಂಭವಿಸಿದೆ, ಬೆಳವಣಿಗೆ ಕುಸಿದಿದೆ, ವ್ಯಾಪಾರ ಕಡಿಮೆಯಾಗಿದೆ ಎಂದು ವಿಶ್ವ ಬ್ಯಾಂಕ್‌ ಕಳವಳ ವ್ಯಕ್ತಪಡಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ 1970ರ ನಂತರ ಜಾಗತಿಕವಾಗಿ ಅತ್ಯಂತ ಕಷ್ಟಕರವಾದ ಆರ್ಥಿಕ ಹಿಂಜರಿತ ಸಂಭವಿಸುವುದು ಸ್ಪಷ್ಟ ಎನ್ನುವುದು ಡೇವಿಡ್‌ ಮಾಲ್ಪಾಸ್‌ ವಿಶ್ಲೇಷಣೆ. ಇದನ್ನು ಸರಿಪಡಿಸಲಿಕ್ಕಾಗಿ ಉತ್ಪಾದನೆ ಹೆಚ್ಚಿಸುವುದು, ಪೂರೈಕೆಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಒಂದು ದಾರಿಯಾಗಿದೆ.

34.5 ಕೋಟಿ ಜನ ಉಪವಾಸದತ್ತ: ರಷ್ಯಾ-ಉಕ್ರೇನ್‌ ಯುದ್ಧ ಶುರುವಾದ ನಂತರ ಜಾಗತಿಕವಾಗಿ ಆಹಾರ ಪೂರೈಕೆ ಮೇಲೆ ಭಾರೀ ಹೊಡೆತ ಬಿದ್ದಿದೆ. ಹಾಗಾಗಿ ಜಗತ್ತಿನ 82 ದೇಶಗಳಲ್ಲಿ 34.5 ಕೋಟಿ ಮಂದಿ ಉಪವಾಸ ಬೀಳುವುದಕ್ಕೆ ಹತ್ತಿರವಾಗುತ್ತಿದ್ದಾರೆ. ಈಗಾಗಲೇ 7 ಕೋಟಿ ಮಂದಿ ಆ ಸ್ಥಿತಿಗೆ ಸಮೀಪಿಸಿದ್ದಾರೆ ಎಂದು ವಿಶ್ವ ಆಹಾರ ಸಂಸ್ಥೆ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು