4:06 PM Thursday15 - May 2025
ಬ್ರೇಕಿಂಗ್ ನ್ಯೂಸ್
ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.…

ಇತ್ತೀಚಿನ ಸುದ್ದಿ

ಮುಂದಿನದ್ದೇ ಕೊನೆ ಚುನಾವಣೆ, ಮತ್ತೆ ಎಂದೂ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

25/03/2022, 19:16

ಮೈಸೂರು(reporterkarnataka.com): ಚುನಾವಣಾ ರಾಜಕೀಯದಿಂದ ನಿರ್ಗಮಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಬಳಿ ಮಾತನಾಡಿದ್ದಾರೆ. ಮುಂದಿನ ಚುನಾವಣೆಯೇ ಕೊನೆಯದ್ದು, ಮತ್ತೆ ಎಂದೂ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.

ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ  ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ ಎಂದು ಅವರು ನುಡಿದರು.

ವರುಣ, ಚಾಮುಂಡೇಶ್ವರಿ ಸೇರಿದಂತೆ ಹಲವು ಕ್ಷೇತ್ರಗಳ ಜನ ಸ್ಪರ್ಧೆಗೆ ಆಹ್ವಾನಿಸಿದ್ದಾರೆ. ಎಲ್ಲ ಕ್ಷೇತ್ರಗಳೂ ಆದ್ಯತೆ, ಆದರೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆಯಲ್ಲಾ, ಈ ಬಗ್ಗೆ ಮುಂದೆ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು