11:14 PM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮೂಡಬಿದ್ರೆ: ಇಬ್ಬರ ಬಂಧನ; 3 ಲಕ್ಷ ರೂ. ಮೌಲ್ಯದ ಕಳವು ಮಾಡಿದ 2 ಬೈಕ್ ವಶ

07/11/2023, 20:07

ಮೂಡಬಿದ್ರೆ(reporterkarnataka.com):ಮೂಡಬಿದ್ರೆ ಠಾಣ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಬಳಿ ಇಬ್ಬರನ್ನು ಬಂಧಿಸಿದ ಪೊಲೀಸರು ಕಳವು ಮಾಡಿದ ಬೈಕ್ ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಕೋಟೆಬಾಗಿಲು ನಿವಾಸಿಗಳಾದ
ಸಯ್ಯದ್ ಝಾಕೀ‌ರ್ ( 20)ಹಾಗೂ ಮೊಹಮ್ಮದ್ ಶಾಹಿ( 24) ಎಂದು ಗುರುತಿಸಲಾಗಿದೆ.
ಮೂಡಬಿದ್ರೆ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಮಂಗಳವಾರ ಬೆಳಗಿನ ಜಾವ ಮೂಡಬಿದ್ರೆ ಠಾಣೆ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಬಳಿ ಇರುವ ಕೊಂಡೆ ಸ್ಟ್ರೀಟ್ ಎಂಬಲ್ಲಿ ಈ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರ ವಶದಲ್ಲಿದ್ದ ನಂಬ್ರ ಪ್ಲೇಟ್ ಇಲ್ಲದ Royal Enfield Classic 350 ಮೋಟಾರು ಸೈಕಲ್‌ ಅಕ್ಟೋಬರ್ 24 ಮತ್ತು 25ರ ರಾತ್ರಿ ಮೂಡಬಿದ್ರೆ ಜೈನ್ ಪೇಟೆಯ ಬಡಗ ಬಸದಿ ಎದುರು ಇರುವ ದೇವಿಕೃಪಾ ಅಪಾರ್ಟ್ ಮೆಟ್ ನ ಪಾರ್ಕಿಂಗ್ ಏರಿಯಾದಲಿ, ನಿಲಿಸಿದನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆರೋಪಿಗಳು ಮೂಡಬಿದ್ರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದಲ್ಲಿರುವ ಎವರ್ ಪ್ರೈಸ್ ರೆಸಿಡೆನ್ಸ್, ಅಪಾರ್ಟ್ ಮೆಂಟ್ ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ KA-19-EU-0009 ನೇ Royal Enfield Classic 350 ಮೋಟಾರು ಸೈಕಲನ್ನು ಕೂಡ ಕಳವು ಮಾಡಿ ಪೇಪರ್ ಮಿಲ್ ಬಳಿ ಇರುವ ಕೀರ್ತಿ ನಗರ ಕ್ರಾಸ್‌ ಬಳಿ ಪೊದೆಗಳ ಮಧ್ಯೆ ಬಚ್ಚಿಟ್ಟಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಅಲ್ಲಿಂದ KA-19-EU-0009 ನೇ Royal Enfield Classic 350 ಮೋಟಾರು ಸೈಕಲನ್ನು ಕೂಡ ಸ್ವಾಧೀನಪಡಿಸಿಕೊಂಡಿದ್ದು ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಅಂದಾಜು ಮೌಲ್ಯ 3 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.


ಪ್ರಕರಣದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಡಿಸಿಪಿ ಸಿದಾರ್ಥ ಗೊಯಲ್ (ಕಾ&ಸು), ಡಿಸಿಪಿ ದಿನೇಶ್ ಕುಮಾರ್ (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯಕ್ ಅವರ ನಿರ್ದೇಶನದಂತೆ, ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ.ಜಿ. ಹಾಗೂ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳಾದ ಮೊಹಮ್ಮದ್ ಇಟ್ಬಾಲ್, ಮೊಹಮ್ಮದ್ ಹುಸೇನ್‌, ಅಕೀಲ್ ಅಹಮ್ಮದ್, ನಾಗರಾಜ್, ವೆಂಕಟೇಶ್‌ ಮತ್ತು ಚಂದ್ರಹಾಸ ರೈ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು