4:47 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮುಂದುವರಿದ ಸಿಸಿಬಿ ಕಾರ್ಯಾಚರಣೆ: 3 ಮಂದಿ ಪೆಡ್ಲರ್ ಗಳ ಬಂಧನ; 10 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

02/08/2023, 23:04

ಮಂಗಳೂರು(reporter Karnataka.com): ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.



ನಂದಾವರದ ಮೊಹಮ್ಮದ್ ಹಫೀಝ್ @ ಅಪ್ಪಿ(35),
ಅಮೀರ್@ ಅಮ್ಮಿ(34), ಹಾಗೂ ಪಾಣೆಮಂಗಳೂರಿನ
ಜಾಕೀರ್ ಹುಸೇನ್ @ ತಾಚೀ(28) ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ತಲಪಾಡಿ ಗ್ರಾಮದ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ KA-50-N-8081 ನೇ ಬಿಳಿ ಬಣ್ಣದ ಮಾರುತಿ ಸ್ವಿಪ್ಟ್ ಕಾರಿನಲ್ಲಿಈ ಮೂವರು ಬಂಧಿತ ಆರೋಪಿಗಳು ಮಾದಕ ವಸ್ತುವಾದ MDMA ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಧಿತರಿಂದ ಒಟ್ಟು 200 ಗ್ರಾಂ ತೂಕದ 10 ಲಕ್ಷ ರೂ.
ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಸ್ವಿಫ್ಟ್ ಕಾರು, 70,000/- ಮೌಲ್ಯದ 3 ಮೊಬೈಲ್ ಫೋನ್ ಗಳು,ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 15,70,500/-ಆಗಬಹುದು. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಜಾಕೀರ್ ಹುಸೇನ್ @ ತಾಚೀ ಎಂಬಾತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಹಾಗೂ ಇತರ 3 ದರೋಡೆ ಪ್ರಕರಣಗಳು, ಬಜ್ಪೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ, ಮಂಗಳೂರು ದಕ್ಷಿಣ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣಗಳು, ಉಡುಪಿ ಜಿಲ್ಲೆಯ ಶಿರ್ವಾ ಹಾಗೂ ಪಡುಬಿದ್ರಿ ಠಾಣೆಯಲ್ಲಿ ಕಳವು ಪ್ರಕರಣ, ಹೀಗೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಜ್ಯಾರಿಯಾಗಿರುತ್ತದೆ.
ಇನ್ನೋರ್ವ ಆರೋಪಿ ಮೊಹಮ್ಮದ್ ಹಫೀಸ್ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಪ್ರಕರಣ, ಬಂಟ್ವಾಳ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು