ಇತ್ತೀಚಿನ ಸುದ್ದಿ
ಮುಂದುವರಿದ ಮಳೆ: ದ.ಕ. ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ನಾಳೆಯೂ ರಜೆ
25/07/2023, 20:38

ಮಂಗಳೂರು(reporterkarnataka.com): ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ದ.ಕ. ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ಜುಲೈ 26ರಂದು ಕೂಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು, ಸರಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ನದಿ, ಕೆರೆ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನ ದಲ್ಲಿರುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.