1:00 AM Thursday9 - January 2025
ಬ್ರೇಕಿಂಗ್ ನ್ಯೂಸ್
ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2… ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ… 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮುಂಗಾರು ಪ್ರಾರಂಭದ ಮುನ್ನವೇ ಕೆರೆಗಳ ಸುಸ್ಥಿತಿ ಪರಿಶೀಲನೆ ನಡೆಸಲಾಗುತ್ತದೆ: ಸಚಿವ ಭೋಸರಾಜು

12/12/2024, 22:31

ಬೆಳಗಾವಿ (reporterkarnataka.com): ಕೆರೆಗಳ ಏರಿಗಳ ಸಂರಕ್ಷಣೆಗಾಗಿ ಸರ್ಕಾರವು ಅನೇಕ ಕ್ರಮಗಳನ್ನು ಕೈಗೊಂಡಿದೆ ಎಂದು ಪರಿಷತ್ತಿನಲ್ಲಿ ವಿವರಿಸಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಪ್ರಾರಂಭವಾಗುವ ಮುಂಚೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕೆರೆಗಳ ಪರಿವೀಕ್ಷಣೆ ಕೈಗೊಂಡು, ಕೆರೆಗಳ ಏರಿ, ಕೋಡಿ, ತೂಬು ಸೇರಿದಂತೆ ಇತ್ಯಾದಿಗಳನ್ನು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಂಡು ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ ಎಂದರು.
ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 3778 ಕೆರೆಗಳಿದ್ದು, ಅತೀ ಮಳೆಯಿಂದ ಕೆರೆಗಳ ಏರಿ ಹಾನಿಯಾದ ಸಂದರ್ಭದಲ್ಲಿ ತುರ್ತು ಸಂರಕ್ಷಣೆಗೆ ಕ್ರಮ ಜರುಗಿಸಲಾಗಿದೆ ಎಂದು ವಿವರಿಸಿದರು.

2023-24ನೇ ಸಾಲಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 210 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 29.12 ಕೋಟಿ ರೂ. ವೆಚ್ಚ ಮಾಡಲಾಗಿದೆ. 2022-23 ರಲ್ಲಿ 638 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, 156 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು