ಇತ್ತೀಚಿನ ಸುದ್ದಿ
ಮುಂಗಾರು ಮತ್ತೆ ಚುರುಕು: ಜೂನ್ 13ರ ಬಳಿಕ ಭಾರಿ ಮಳೆ ನಿರೀಕ್ಷೆ; ರೆಡ್ ಅಲರ್ಟ್ ಘೋಷಣೆ
10/06/2021, 13:01
ಬೆಂಗಳೂರು(reporterkarnataka news): ಮುಂಗಾರು ಸದ್ಯ ದುರ್ಬಲವಾಗಿದ್ದರೂ ಜೂನ್ 13ರ ಬಳಿಕ ಅದು ಚುರುಕುಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 13, 14 ಮತ್ತು 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 14ರಂದು ಭಾರಿಯಿಂದ ಅತೀ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗುರುವಾರ ಬೆಳಗ್ಗಿನಿಂದಲೇ ಮುಂಗಾರು ಚುರುಕುಗೊಂಡಿದೆ. ಮುಂದಿನ ದಿನಗಳಲ್ಲಿ ಅದು ಇನ್ನಷ್ಟು ಪ್ರಬಲಗೊಳ್ಳುವ ನಿರೀಕ್ಷೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಜೂನ್ 13ರಿಂದ ಭಾರಿ ಮಳೆಯಾಗಲಿದೆ.