11:25 PM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹ

24/09/2024, 19:40

ಮಂಗಳೂರು(reporterkarnataka.com):ಜಾತಿವಾದಿ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದೆ.
ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕನಾಗಿರುವ ಮುನಿರತ್ನ, ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರಿಂದ, ರಾಜ್ಯದ ಅಪಾರ ದಲಿತರ ಮತ್ತು ಮಹಿಳೆಯರ ಮನಸ್ಸಿಗೆ ಅತೀವ ನೋವು ಉಂಟಾಗಿದ್ದು, ದೇಶ ಸ್ವಾತಂತ್ರ್ಯ ಕಂಡು 75 ವರ್ಷ ಕಳೆದರೂ ದೇಶದಲ್ಲಾಗುತ್ತಿರುವ ಮಹಿಳೆಯರ ಮತ್ತು ದಲಿತರ ಮೇಲಿನ ದೌರ್ಜನ್ಯದ ಪ್ರತೀಕವಾಗಿ ಮತ್ತು ಸಂವಿಧಾನದ ಪಾಲನೆಗಾಗಿ ಆಯ್ಕೆಯಾದ ಶಾಸಕರೇ ತನ್ನ ಲಜ್ಜೆಗೆಟ್ಟ ಜಾತಿವಾದಿ, ಮನುವಾದಿ ಪಾಲಕರಾಗಿ ಸಂವಿಧಾನ ವಿರೋಧಿಯಾಗಿ ರಾಜ್ಯವೇ ನಾಚಿಕೆ ಪಡುವಂತೆ ನಡೆದುಕೊಂಡ ಬಿಜೆಪಿ ಶಾಸಕ ಮುನಿರತ್ನರ ನೀಚ ಬುದ್ಧಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ದಿನೇಶ್ ಮೂಳೂರು ಅವರ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್., ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಟಿ.ಹೊನ್ನಯ್ಯ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪ್ರೇಮ್ ನಾಥ್ ಪಿ.ಬಿ. ಬಳ್ಳಾಲ್ ಬಾಗ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷರಾದ ಜಯಕುಮಾರ್, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಗಣೇಶ್ ಪ್ರಸಾದ್, ಕಾಂಗ್ರೆಸ್ ನಾಯಕರಾದ ಪ್ರಕಾಶ್ ಕೋಡಿಕಲ್, ಇಂದಿರಾ ನಾಗೇಶ್, ಗುರುಪ್ರಸಾದ್ ಮೂಳೂರು, ಅಭಿಷೇಕ್, ಬಾಬು ಅಳಿಯೂರು ಮತ್ತು ಇತರರು ಉಪಸ್ಥಿತರಿದ್ದರು..

ಇತ್ತೀಚಿನ ಸುದ್ದಿ

ಜಾಹೀರಾತು