12:27 PM Sunday18 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಮಂಗಳೂರು ಘಟಕದ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ

18/06/2026, 18:49

ಮಂಗಳೂರು(reporterkarnataka.com): ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆಪಿಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು.


ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಅಜಯ ಕುಮಾರ್‌ , ಉಪಾಧ್ಯಕ್ಷರಾಗಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ವಿಜಯ ಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ ಸದಸ್ಯರಾಗಿ ಜೋತಿಷ್‌ ಕುಮಾರ್‌, ಜಯಲಕ್ಷ್ಮೀ ಚಂದ್ರಮೋಹನ್‌ , ಮಣಿಕಂಠನ್‌, ವಿನೋದ್‌ ವಿನೋದ್‌ರಾಜ್‌, ಹರೀಶ್‌ ಗೋವಿಂದ್‌, ದೇವರಾಜ್‌ , ವಿನಯನ್‌ ನಾಯರ್‌, ಆಯ್ಕೆಗೊಂಡರು.
ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸುಜಾತಾ ನಾಯರ್‌, ಕಾರ್ಯದರ್ಶಿಯಾಗಿ ಶ್ರೀಜಾ ನಂಬಿಯಾರ್‌ ಹಾಗೂ ಖಜಾಂಚಿಯಾಗಿ ಗೋಪಿಕಾ ರಾಣಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾ ವಿಜಯಕುಮಾರ್‌, ಜತೆ ಕಾರ್ಯದರ್ಶಿಯಾಗಿ ಅನಿತಾ ಜಯಚಂದ್ರನ್‌ ಆಯ್ಕೆಯಾಗಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ಉಡುಪಿ ಘಟಕ ಸಜಿ ಪಿಳ್ಳೈ ಹಾಗೂ ವೀಕ್ಷಕರಾಗಿ ಮೋಹನ್ ದಾಸ್‌, ಉಡುಪಿ ಅವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು