3:22 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

Murder | ಚಿಕ್ಕಮಗಳೂರು: ಸಹೋದರನ ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ವ್ಯಕ್ತಿ ಆತ್ಮಹತ್ಯೆ

18/02/2025, 11:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ
ಸಹೋದರನ ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು
ಕೊಲೆ ಮಾಡಿದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕುಡಿದ ಮತ್ತಿನಲ್ಲಿದ್ದ ಶಶಿಧರನಿಗೆ ಸಹೋದರನ ಅತ್ತೆ ಯಮುನಾ (65)
ಬುದ್ದಿ ಹೇಳಿದ್ದರು. ಇದರಿಂದ ಕ್ರೋಧಗೊಂಡ ಶಶಿಧರ್ ಸೋದರನ ಅತ್ತೆಯಾದ ಯಮುನಾರ ತಲೆಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ. ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಬಣಕಲ್ ಪೊಲೀಸರು ನಿನ್ನೆ ತನಿಖೆ ಆರಂಭಿಸಿದ್ದರು. ಶಶಿಧರ್ ನನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ ಇಂದು ಭಾರತೀಬೈಲು ಕಾಫಿತೋಟದಲ್ಲಿ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ದುರ್ಘಟನೆ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು