9:54 AM Sunday18 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ತಂಗಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ: ಅಣ್ಣನಿಗೆ 4 ವರ್ಷ ಸಜೆ; 10 ಸಾವಿರ ದಂಡ

27/08/2026, 18:50

ಮಂಗಳೂರು(reporterkarnataka.com): ತಂಗಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಅಣ್ಣನಿಗೆ l2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವ4 ವರ್ಷ ಸಜೆ ವಿಧಿಸಿ ತೀರ್ಪು ನೀಡಿದೆ.
ಆರೋಪಿ ಸ್ಯಾಮ್ಸನ್ ಪ್ರಾನ್ಸಿಸ್ ಕುಟಿನ್ಹಾ ಎಂಬವನು 2019, ಅಕ್ಟೋಬರ್ 8ರಂದು ಮಧ್ಯಾಹ್ನ 12-00 ಗಂಟೆಗೆ ತನ್ನ ವಾಸದ ಮನೆಯಾದ ಕಂಬಳಪದವು ಎಂಬಲ್ಲಿ ತನ್ನ ತಂಗಿ ಫಿಯೋನಾ ಸ್ವೀಡಲ್ ಕುಟಿನ್ಹಾ ಎಂಬವಳೊಂದಿಗೆ ಮೊಬೈಲ್ ನ್ನು ಉಪಯೋಗಿಸಲು ಕೊಡುವಂತೆ ಕೇಳಿದಾಗ ಮೊಬೈಲ್ ವಿಚಾರವಾಗಿ ಅವರೊಳಗೆ ಮಾತುಕತೆಯಾದ ಸಮಯಕ್ಕೆ ಕೋಪಗೊಂಡು ಆರೋಪಿಯು ಸುತ್ತಿಗೆಯಿಂದ ಆಕೆಯ ತಲೆಗೆ ಹಲ್ಲೆ ನಡೆಸಿ, ಆಕೆಯನ್ನು ಕೊಲೆ ಮಾಡಿ, ಆಕೆಯ ಮೃತದೇಹವನ್ನು ಮನೆಯ ಹಿಂಭಾಗದ ಪೊದೆಯಲ್ಲಿ ಬಚ್ಚಿಟ್ಟಿದ್ದ. ಮೃತ ಸ್ವೀಡಲ್ ಕುಟಿನ್ಹಾ ರವರ ತಂದೆ ಪ್ರಾನ್ಸಿಸ್ ಕುಟಿನ್ಹಾರವರು ಮಗಳು ಕಾಣೆಯಾಗಿರುವ ಬಗ್ಗೆ ದೂರು ಠಾಣೆಯಲ್ಲಿ ಮೊ.ನಂ 67/2019 ಕಲಂ 363 ಐಪಿಸಿಯಂತೆ ಪ್ರಕರಣ ದಾಖಲಿಸಿರುತ್ತಾರೆ. ನಂತರ ಈ ಪ್ರಕರಣವನ್ನು ಕಡತವನ್ನು ಎಸಿಪಿ ದಕ್ಷಿಣ, ಟಿ. ಕೋದಂಡ ರಾಮ್ ರವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಕಲಂ 302, 201 ಐಪಿಸಿ ಪ್ರಕಾರ ದಿನಾಂಕ 10-01-2020 ರಂದು ದೋಷಾರೋಪಣಾ ಪತ್ರವನ್ನು ಸಲ್ಲಿಸಿರುತ್ತಾರೆ. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ದಿನಾಂಕ 24-08-2026 ರಂದು ಆರೋಪಿ ಸ್ಯಾಮ್ಸನ್ ಪ್ರಾನ್ಸಿಸ್ ಕುಟಿನ್ಹಾಗೆ ಕಲಂ 304 (ii) ಐಪಿಸಿಗೆ 4 ವರ್ಷ ಸಜೆ ಮತ್ತು ರೂ 10,000/- ದಂಡ , ಕಲಂ 201 ಐಪಿಸಿ ಗೆ 1 ವರ್ಷ ಸಜೆ ಮತ್ತು ರೂ 1,000/- ದಂಡವನ್ನು ವಿಧಿಸಿರುತ್ತದೆ. ಅಭಿಯೋಜನ ಪರವಾಗಿ ಜ್ಯೋತಿ ಪ್ರಮೋದ ನಾಯಕ್ ಅವರು ವಾದಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು