9:16 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮುರ್ಡೇಶ್ವರ: ಸಮುದ್ರಕ್ಕಿಳಿದ 7 ಮಂದಿ ಶಾಲಾ ವಿದ್ಯಾರ್ಥಿನಿಯ ಪೈಕಿ 4 ಮಂದಿ ನೀರುಪಾಲು; ಪ್ರವಾಸಕ್ಕೆ ಬಂದಿದ್ದ ಮುಳಬಾಗಿಲಿನ ಮಕ್ಕಳು

10/12/2024, 22:01

ಅನುಷಾ ಶಿರಾಲಿ ಕಾರವಾರ

info.reporterkarnataka@gmail.com

ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ.
ಸಂಜೆ ವೇಳೆ ಕಡಲ ತೀರದಲ್ಲಿ ಆಟವಾಡುತ್ತಿದ್ದ ಕೋಲಾರ ಜಿಲ್ಲೆಯಿಂದ ಆಗಮಿಸಿದ್ದ 46 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕಿಯರು ಸಮುದ್ರದ ಅಲೆಗೆ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ಮಕ್ಕಳಿಗಾಗಿ ಶೋಧ ಕಾರ್ಯ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದರು. 7 ಮಂದಿ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ಪೈಕಿ ಮೂವರು ವಿದ್ಯಾರ್ಥಿನಿಯರಾದ ಯಶೋದಾ, ವೀಕ್ಷಣಾ, ಲಿಪಿಕಾ ಎನ್ನುವರನ್ನು ರಕ್ಷಣೆ ಮಾಡಲಾಗಿದೆ. ಇನ್ನು 9ನೇ ತರಗತಿ ಓದುತ್ತಿದ್ದ ಮುಳಬಾಗಲು ತಾಲ್ಲೂಕಿನ ಪೂಜಾರಹಳ್ಳಿ ಗೋಪಾಲಪ್ಪ ಎಂಬುವವರ ಪುತ್ರಿ ಶ್ರಾವಂತಿ ಮೃತಪಟ್ಟಿದ್ದು, ಇದೀಗ ಮೃತದೇಹವನ್ನು ಹೊರತೆಗೆಯಲಾಗಿದೆ. ಸಮುದ್ರ ಪಾಲಾದ ಮುಳಬಾಗಲು ತಾಲ್ಲೂಕಿನ ಎನ್.ಗಡ್ಡೂರು ನಿವಾಸಿ ಜೈರಾಮಪ್ಪ ಪುತ್ರಿ ದೀಕ್ಷಾ, ಹಬ್ಬಣಿ ಗ್ರಾಮದ ಚನ್ನರೆಡ್ಡಪ್ಪ ಪುತ್ರಿ ಲಾವಣ್ಯ, ದೊಡ್ಡಗಟ್ಟಹಳ್ಳಿಯ ಮುನಿರಾಜು ಪುತ್ರಿ ವಂದನಾ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು