ಇತ್ತೀಚಿನ ಸುದ್ದಿ
ಮುರುಡೇಶ್ವರ: ಬಾಲಕಿಯರ ರಕ್ಷಿಸಲಾಗದೆ ಅಸಹಾಯಕರಾದ ಲೈಫ್ ಗಾರ್ಡ್; ಸಚಿವ ವೈದ್ಯರೇ ಏನು ಮಾಡುತ್ತಿದ್ದೀರಿ?
10/12/2024, 22:05
ಭಟ್ಕಳ(reporterkarnataka.com): ಮುರುಡೇಶ್ವರ ಸಮುದ್ರ ತೀರದಲ್ಲಿ ಸಮುದ್ರಪಾಲಾಗುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರನ್ನು ರಕ್ಷಿಸಲಾಗದೆ ಇಲ್ಲಿನ ಲೈಫ್ ಗಾರ್ಡ್ ಗಳು ಅಸಹಾಯಕರಾದರು.
ಜೀವ ರಕ್ಷಣೆಗೆ ಬೇಕಾದ ಯಾವುದೇ ಸಲಕರಣೆ ಪೂರೈಸದ ಹಿನ್ನೆಲೆಯಲ್ಲಿ ಮಕ್ಕಳನ್ನ ರಕ್ಷಿಸಲಾಗದೆ ಲೈಫ್ ಗಾರ್ಡ್ಸ್ ಅಸಹಾಯಕರಾಗಿ ನೋಡಬೇಕಾಯಿತು. ಲೈಫ್ ಗಾರ್ಡ್ ಗಳಿಗೆ ಅಗತ್ಯ ಸಲಕರಣೆ ಒದಗಿಸುವಂತೆ ಮಾಧ್ಯಮಗಳು ವರದಿ ಮಾಡಿದರೂ ಜಿಲ್ಲಾಡಳಿತವಾಗಲಿ, ಪ್ರವಾಸೋದ್ಯಮ ಇಲಾಖೆ ಎಚ್ಚೆತ್ತುಕೊಂಡಿಲ್ಲ. ಜೀವ ರಕ್ಷಣೆಗೆ ಬೇಕಾಗುವ
ಸಲಕರಣೆ ಸಮಸ್ಯೆ ಬಗೆಹರಿಸುವ ಅಶ್ವಾಸನೆಯನ್ನು ಸಚಿವ ಮಂಕಾಳು ವೈದ್ಯ ನೀಡಿದ್ದರು. ಆದರೆ ನಾಲ್ವರು ಬಾಲಕಿಯರ ಪ್ರಾಣಪಕ್ಷಿ ಹಾರಿ ಹೋಗುವವರೆಗೂ ಅದು ಭರವಸೆಯಾಗಿಯೇ ಉಳಿಯಿತು.
ಕೆಲವು ದಿನಗಳ ಹಿಂದೆ ಮುರುಡೇಶ್ವರದಲ್ಲಿ ಪ್ರವಾಸಿಗರು ಸಮುದ್ರ ಪಾಲಾಗಿದ್ದರೂ ಕೂಡ ಅಗತ್ಯ ಸಲಕರಣೆ ಇಲ್ಲದ ಕಾರಣ ಲೈಫ್ ಗಾರ್ಡ್ಸ್ಗಳು ಸಮುದ್ರಕ್ಕೆ ಇಳಿದಿರಲಿಲ್ಲ. ಹೀಗಾಗಿ ತಾಲೂಕಾಡಳಿತ ಪ್ರವಾಸಿಗರನ್ನು ಕಡಲ ತೀರಕ್ಕೆ ನಿರ್ಬಂಧಿಸಿತ್ತು. ಬಳಿಕ ಕಳೆದ ಒಂದು ತಿಂಗಳಿನಿಂದ ನಿರ್ಬಂಧ ತೆರವುಗೊಳಿಸಿತ್ತು. ಆದರೆ ಸುರಕ್ಷತೆ ಕ್ರಮ ಮಾತ್ರ ಕೈಗೊಂಡಿಲ್ಲ.