6:16 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಸ್ಕಿ: ದುಷ್ಕರ್ಮಿಗಳಿಂದ ಬೆನಕನಾಳ ಗೃಹರಕ್ಷಕ ಸಿಬ್ಬಂದಿಯ ಮನೆ, ಬೈಕ್‌ಗೆ ಬೆಂಕಿ

30/06/2026, 23:05

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಬೆನಕನಾಳ ಗ್ರಾಮದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದ್ದು,ಗೃಹ ರಕ್ಷಕ (ಹೋಂ ಗಾರ್ಡ್) ಸಿಬ್ಬಂದಿಯೊಬ್ಬರ ಮನೆ ಹಾಗೂ ದ್ವಿಚಕ್ರ ವಾಹನಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

*ಘಟನೆಯ ವಿವರ:*
ಬೆನಕನಾಳ ಗ್ರಾಮದ ನಿವಾಸಿಯಾದ, ನಾಗಪ್ಪ ಅವರ ಪುತ್ರ ನರಸಿಂಹ ನಾಯಕ್ ಎಂಬುವರು ಗೃಹ ರಕ್ಷಕರ ದಳದಲ್ಲಿ (ಹೋಂ ಗಾರ್ಡ್) ಸೇವೆ ಸಲ್ಲಿಸುತ್ತಿದ್ದಾರೆ.


ಎಂದಿನಂತೆ ರಾತ್ರಿ ಮನೆಯವರು ಮಲಗಿದ್ದ ವೇಳೆ ಬಂದ ಮುಸುಕುಧಾರಿ ಅಥವಾ ಅಪರಿಚಿತ ದುಷ್ಕರ್ಮಿಗಳು, ಇವರ ಮನೆ ಹಾಗೂ ಹೊರಗಡೆ ನಿಲ್ಲಿಸಲಾಗಿದ್ದ ಬೈಕ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

*ಸಂಪೂರ್ಣ ಭಸ್ಮ:* ಬೆಂಕಿಯ ಜ್ವಾಲೆ ತೀವ್ರವಾಗಿದ್ದರಿಂದ ನರಸಿಂಹ ನಾಯಕ್ ಅವರಿಗೆ ಸೇರಿದ ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು,ಮನೆಗೂ ಕೂಡ ಭಾರೀ ಹಾನಿಯಾಗಿದೆ. ತಡರಾತ್ರಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಸ್ಥಳೀಯರು ತಕ್ಷಣ ಎಚ್ಚೆತ್ತುಕೊಂಡು ಬೆಂಕಿ ನಂದಿಸಲು ಯತ್ನಿಸಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ.

*ಆತಂಕದಲ್ಲಿ ಗ್ರಾಮಸ್ಥರು:* ಕಾನೂನು ಸುವ್ಯವಸ್ಥೆ ಕಾಪಾಡಲು ನೆರವಾಗುವ ಗೃಹ ರಕ್ಷಕ ಸಿಬ್ಬಂದಿಯ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದು ಬೆನಕನಾಳ ಗ್ರಾಮದಲ್ಲಿ ತೀವ್ರ ಆತಂಕ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಹಳೇ ವೈಷಮ್ಯ ಅಥವಾ ಇನ್ಯಾವುದೋ ಕಾರಣಕ್ಕೆ ಈ ಕೃತ್ಯ ಎಸಗಲಾಗಿದೆಯೇ ಎಂಬ ಸಂಶಯ ವ್ಯಕ್ತವಾಗಿದೆ.
ಸ್ಥಳಕ್ಕೆ ಮಸ್ಕಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು,ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು