1:29 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯಿಂದ ನೀರಿನ ಅರವಟ್ಟಿಗೆ ಆರಂಭ

13/03/2025, 11:19

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಹಳೆ ಬಸ್ ನಿಲ್ದಾಣ ಕಿತ್ತೂರಾಣಿ ಚನ್ನಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಬಳಿ ಪ್ರತಿ ವರ್ಷದಂತೆ ಈ ವರ್ಷವೂ ಸತತ 3ನೇ ವರ್ಷ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ಮಸ್ಕಿ ತಾಲೂಕು ಘಟಕ ಹಾಗೂ ಬಂಗ್ಲೆ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಮಾನಿ ಬಳಗದಿಂದ ತಾಲೂಕ ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರ ನೇತೃತ್ವದಲ್ಲಿ ಆಟೋ ಸ್ಟ್ಯಾಂಡ್ ಬಳಿ ಕುಡಿಯುವ ನೀರಿನ ಅರವಟ್ಟಿಗೆಗೆ ಪುರಸಭೆ ಕೌನ್ಸಿಲರ್ ಶರಣಯ್ಯ ಸ್ವಾಮಿ ಸೋಪ್ಪಿಮಠ ಅವರು ಚಾಲನೆ ನೀಡಿದರು.


ಮಹಾ ಮಂಗಳಾರತಿಯೊಂದಿಗೆ ನೀರಿನ ಅರವಟ್ಟಿಗೆ ಪ್ರಾರಂಭ ಮಾಡಲಾಯಿತು. ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ, ಬಂಗ್ಲೆ
ಮಲ್ಲಿಕಾರ್ಜುನ್ ಅವರ ಆದೇಶದಂತೆ ಬೇಸಿಗೆ ದಿನದಲ್ಲಿ ಜನರಿಗೆ ಸಹಾಯವಾಗುವ ದೃಷ್ಟಿಯಲ್ಲಿ ತಂಪು ಪಾನಿಯನ್ನು ಎಲ್ಲರೂ ನೀಡಲಾಗುತ್ತದೆ. ಬಂಗ್ಲೆ ಮಲ್ಲಿಕಾರ್ಜುನ್ ಅವರ ಕನಸು ನನಸಾಗಲಿ. ಇದು ಮೂರನೇ ವರ್ಷದ ನೀರಿನ ಅರವಟ್ಟಿಗೆಯಾಗಿದೆ. ಪ್ರಥಮ ವರ್ಷ ಮುದುಗಲ್ ಕ್ರಾಸಿನಲ್ಲಿ ಮಾಡಲಾಯಿತು. ಎರಡನೇ ವರ್ಷ ಅಂತರಗಂಗೆ ಬಸವೇಶ್ವರ ಸರ್ಕಲ್ ನಲ್ಲಿ ಮಾಡಲಾಯಿತು. ಬಂಗ್ಲೆ ಅವರ ಹಾಕಿಕೊಟ್ಟ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆ. ಅವರ ಪ್ರತಿಯೊಂದು ಕೆಲಸ ಹಿಂದೆ ಭಗವಂತನು ಇರುತ್ತಾನೆ
ಎಂಬ ದೃಷ್ಟಿಯಿಂದ ಈ ಕಾರ್ಯವನ್ನು ಮಾಡುತಿದ್ದೇವೆ. ಸದಾ ಕಾಲ ಹೀಗೆ ನಡೆಯಲಿ ಎಂದು ಹೇಳಿದರು.
ಪುರಸಭೆ ಸದಸ್ಯ ಪಂಪಣ್ಣ ಧನ ಶೆಟ್ಟಿ , ವಸಂತ ವೆಂಕಟಪುರ, ವಿರೂಪಾಕ್ಷಯ್ಯ ಸ್ವಾಮಿ, ಉಮೇಶ್ , ವೀರೇಶ್, ಧನಶೆಟ್ಟಿ , ವಿಶ್ವನಾಥ ಬಸವರಾಜ್ ಸಜ್ಜನ್ ಸೇರಿದಂತೆ ಇನ್ನು ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು